ಸ್ವಾತಂತ್ರ್ಯ ದಿನಾಚರಣೆ: ದಾಳಿಗೆ ಸಂಚು ರೂಪಿಸಿದ್ದ 4 ಜೆಇಎಂ ಉಗ್ರರ ಬಂಧನ, ತಪ್ಪಿದ ಭಾರೀ ವಿಧ್ವಂಸಕ ಕೃತ್ಯ
ಸ್ವಾತಂತ್ರ್ಯ ದಿನಾಚರಣೆ ದಿನದಂದು ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ನಾಲ್ವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಈ ಮೂಲಕ ದೊಡ್ಡ ವಿಧ್ವಂಸಕ ಕೃತ್ಯವೊಂದು ತಪ್ಪಿದಂತಾಗಿದೆ.

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ದಿನದಂದು ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ನಾಲ್ವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಈ ಮೂಲಕ ದೊಡ್ಡ ವಿಧ್ವಂಸಕ ಕೃತ್ಯವೊಂದು ತಪ್ಪಿದಂತಾಗಿದೆ.
ಕಾಶ್ಮೀರದಲ್ಲಿದ್ದ ಜೆಇಎಂ ಅಡಗುತಾಣಗಳ ಮೇಲೆ ಇಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ದಾಳಿ ನಡೆಸಿದ್ದು, ನಾಲ್ವರು ಉಗ್ರರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮವನ್ನು ಕರಾಳ ದಿನವನ್ನಾಗಿ ಮಾಡುವ ಉದ್ದೇಶ ಹೊಂದಿದ್ದ ಈ ಬಂಧಿತ ಉಗ್ರರು, ಇದಕ್ಕಾಗಿ ಜಮ್ಮುವಿನಲ್ಲಿ ವಾಹನದಲ್ಲಿ ಐಇಡಿ ಇಟ್ಟು ಸ್ಫೋಟಿಸಲು ಸಂಚು ರೂಪಿಸಿದ್ದರು ಎಂದು ಜಮ್ಮುವಿನ ಐಜಿಪಿ ಮಾಹಿತಿ ನೀಡಿದ್ದಾರೆ.
ಬಂಧಿತ ನಾಲ್ವರು ಉಗ್ರರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ. ಈ ಉಗ್ರರು ಸ್ವಾತಂತ್ರ್ಯ ದಿನಾಚರಣೆಯ ದಿನದಂದು ದಾಳಿ ನಡೆಸಲು ಸಂಚು ರೂಪಿಸಿದ್ದರು. ಅಲ್ಲದೇ, ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿ ಡ್ರೋಣ್ ಮೂಲಕ ಕಾಶ್ಮೀರದಲ್ಲಿರುವ ಉಗ್ರರಿಗೆ ರವಾನಿಸುತ್ತಿದ್ದರು. ನಾಲ್ವರು ಉಗ್ರರ ಬಂಧನದಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


