ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಈ ಬಾರಿಯ ಕೃಷಿ ಬಜೆಟ್ ಅರ್ಪಣೆ: ತಮಿಳುನಾಡು ಸರ್ಕಾರ
ಎಂಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ಇದೇ ಮೊದಲ ಬಾರಿಗೆ ಕೃಷಿಗಾಗಿ ವಿಶೇಷ ಬಜೆಟ್ ಮಂಡಿಸಿದ್ದು, ಈ ಬಜೆಟ್ ಅನ್ನು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಮೂರು ಹೊಸ ಕಾನೂನುಗಳ ವಿರುದ್ಧ ಪ್ರತಿಭಟನೆ...

ಚೆನ್ನೈ: ಎಂಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ಇದೇ ಮೊದಲ ಬಾರಿಗೆ ಕೃಷಿಗಾಗಿ ವಿಶೇಷ ಬಜೆಟ್ ಮಂಡಿಸಿದ್ದು, ಈ ಬಜೆಟ್ ಅನ್ನು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಮೂರು ಹೊಸ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಅರ್ಪಿಸಿದೆ.
ಇಂದು ರಾಜ್ಯ ವಿಧಾನಸಭೆಯಲ್ಲಿ ಕೃಷಿಗಾಗಿ ಮೊದಲ ವಿಶೇಷ ಬಜೆಟ್ ಮಂಡಿಸಿದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ಎಮ್‌ಆರ್‌ಕೆ ಪನ್ನೀರಸೆಲ್ವಂ ಅವರು, ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಈ ಕೃಷಿ ಬಜೆಟ್ ಅನ್ನು ಅರ್ಪಿಸಲಾಗಿದೆ ಎಂದು ಹೇಳಿದರು.
ಕೃಷಿ ಬಜೆಟ್ ನ ಪ್ರಮುಖ ಅಂಶಗಳು
ಕೃಷಿ ಕ್ಷೇತ್ರದ ಬೆಳವಣಿಗೆಗೆ 16 ಅಂಶಗಳ ಕಾರ್ಯತಂತ್ರವನ್ನು ಅಳವಡಿಸಿಕೊಳ್ಳಬೇಕು, ಇದರಲ್ಲಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ, ರಾಗಿ, ಹಣ್ಣುಗಳು ಮತ್ತು ಇತರ ಕೃಷಿ ಉತ್ಪನ್ನಗಳಿಗೆ ಸಮಂಜಸವಾದ ಬೆಲೆಯನ್ನು ಖಾತರಿಪಡಿಸುವುದು.
ಯುವಕರನ್ನು ಕೃಷಿ ಉದ್ಯಮಿಗಳಾಗಿ ಪ್ರೋತ್ಸಾಹಿಸುವುದು.
ಸಾವಯವ ಕೃಷಿಗಾಗಿ ಹೊಸ ಯೋಜನೆಯನ್ನು ಘೋಷಿಸಲಾಗಿದೆ; ಸಾವಯವ ಕೃಷಿಗಾಗಿ ಪ್ರತ್ಯೇಕ ಇಲಾಖೆಯನ್ನು ರಚಿಸಲಾಗುವುದು.
ತಮಿಳುನಾಡಿನಲ್ಲಿ ಸಾವಯವ ಕೃಷಿಯಲ್ಲಿ ತೊಡಗಿರುವ ರೈತರಿಗೆ ಇನ್ಪುಟ್ ಸಬ್ಸಿಡಿಗಳನ್ನು ನೀಡಲಾಗುವುದು ಎಂದು ಕೃಷಿ ಸಚಿವರು ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


