ಹತನಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನ ತಂದೆಯಿಂದ ಪುಲ್ವಾಮಾದಲ್ಲಿ ರಾಷ್ಟ್ರ ಧ್ವಜಾರೋಹಣ!
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿಯ ತಂದೆ ಮುಜಾಫರ್ ವಾನಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಪುಲ್ವಾಮಾದ ಟ್ರಾಲ್ನಲ್ಲಿ ಧ್ವಜಾರೋಹಣ ಮಾಡಿದ್ದು, ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪುಲ್ವಾಮ: ಭಾರತೀಯ ಸೇನಾಪಡೆಗಳ ಕಾರ್ಯಾಚರಣೆ ವೇಳೆ ಹತನಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿಯ ತಂದೆ ಮುಜಾಫರ್ ವಾನಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಪುಲ್ವಾಮಾದ ಟ್ರಾಲ್ನಲ್ಲಿ ಧ್ವಜಾರೋಹಣ ಮಾಡಿದ್ದು, ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
75ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಪುಲ್ವಾಮಾದ ಸರ್ಕಾರಿ ಶಾಲೆಯೊಂದರಲ್ಲಿ ಧ್ವಜಾರೋಹಣ ನೆರವೇರಿದ್ದು, ವೃತ್ತಿಯಲ್ಲಿ ಶಿಕ್ಷಕರಾಗಿರುವ ಮುಜಾಫರ್ ವಾನಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ.
ಮೃತ ಉಗ್ರನ ತಂದೆ ಧ್ವಜಾರೋಹಣ ಮಾಡಿರುವ ಸುದ್ದಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಮುಜಾಫರ್ ವಾನಿ ಮಗ ಬುರ್ಹಾನ್ ವಾನಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಆಗಿದ್ದ. ತನ್ನ ಸೋಷಿಯಲ್ ಮೀಡಿಯಾ ಅಕೌಂಟ್ಗಳ ಮೂಲಕ ಕಾಶ್ಮೀರಿ ಯುವಕರನ್ನು ಉಗ್ರಸಂಘಟನೆಗೆ ಸೆಳೆಯುವ ಪ್ರಯತ್ನವನ್ನು ಸದಾ ಮಾಡುತ್ತಿದ್ದ.
2016ರಲ್ಲಿ ಈತನ ವಿರುದ್ಧ ಕಾರ್ಯಾಚರಣೆ ಮಾಡಿ ಹತ್ಯೆ ಮಾಡಲಾಗಿತ್ತು. ಬುರ್ಹಾನ್ ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಪೊಲೀಸ್ ಐಪಿಎಸ್ ಅಧಿಕಾರಿ ಅಬ್ದುಲ್ ಜಬ್ಬರ್ಗೆ, ಕಳೆದ ವರ್ಷ ಗಣರಾಜ್ಯೋತ್ಸವದಂದು ಪೊಲೀಸ್ ಮೆಡಲ್ ಕೊಟ್ಟು ಪುರಸ್ಕರಿಸಲಾಗಿತ್ತು.
ಬುರ್ಹಾನ್ ತನ್ನ 15ನೇ ವಯಸ್ಸಿನಲ್ಲಿಯೇ ಮನೆಬಿಟ್ಟಿದ್ದ. 2010ರಲ್ಲಿ ಮನೆಯನ್ನು ತೊರೆದು ಹೋಗಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಸೇರಿಕೊಂಡಿದ್ದ. ಬುರ್ಹಾನ್ ವಾನಿ ಹತ್ಯೆಯನ್ನು ಖಂಡಿಸಿ ಕಾಶ್ಮೀರದಲ್ಲಿ ಸುಮಾರು 5 ತಿಂಗಳ ಕಾಲ ಅವನ ಅನುಯಾಯಿಗಳು ಮುಷ್ಕರ ನಡೆಸಿದ್ದವು. ಆಗಲೂ ಘರ್ಷಣೆ ನಡೆದು ನೂರು ಮಂದಿ ಸಾವನ್ನಪ್ಪಿದ್ದರು. ಅಂತಹ ದೊಡ್ಡ ಉಗ್ರನ ತಂದೆ ಇಂದು ರಾಷ್ಟ್ರಧ್ವಜ ಹಾರಿಸಿದ್ದು ಪ್ರಶಂಸೆಗೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


