ಸುಪ್ರೀಂ ಕೋರ್ಟ್ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಮಹಿಳೆ
ಸುಪ್ರೀಂ ಕೋರ್ಟ್‌ನ ಹೊರಗೆ ಒಬ್ಬ ಪುರುಷ ಮತ್ತು ಮಹಿಳೆ ಇಬ್ಬರೂ ಸೋಮವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ಸುಪ್ರೀಂ ಕೋರ್ಟ್‌ನ ಹೊರಗೆ ಒಬ್ಬ ಪುರುಷ ಮತ್ತು ಮಹಿಳೆ ಇಬ್ಬರೂ ಸೋಮವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರೂ ಆತ್ಮಹತ್ಯೆ ನಿರ್ಧಾರದ ಹಿಂದಿನ ಕಾರಣ ತಕ್ಷಣವೇ ತಿಳಿದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಪುರುಷ ಮತ್ತು ಮಹಿಳೆ ಬೆಂಕಿ ಹಚ್ಚಿಕೊಳ್ಳುವ ಮುನ್ನ ತಮ್ಮ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಪ ಪೊಲೀಸ್ ಆಯುಕ್ತ(ನವದೆಹಲಿ)ದೀಪಕ್ ಯಾದವ್ ಹಾಗೂ ಸ್ಥಳದಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ತಂಡ, ಪುರುಷ ಮತ್ತು ಮಹಿಳೆಯನ್ನು ರಕ್ಷಿಸಿದೆ.
ಪೊಲೀಸ್ ತಂಡ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು ಮತ್ತು ತಕ್ಷಣವೇ ಸಂತ್ರಸ್ತರನ್ನು ಚಿಕಿತ್ಸೆಗಾಗಿ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಮತ್ತು ಮಹಿಳೆಯ ವಿಚಾರಣೆ ನಡೆಯುತ್ತಿದೆ ಮತ್ತು ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


