ಪೆಗಾಸಸ್ ಪ್ರಕರಣದ ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸಲ್ಲಿಸಲಾಗಿರುವ ಅರ್ಜಿಗಳು ಆಧಾರರಹಿತ: ಕೇಂದ್ರ ಸರ್ಕಾರ
ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳಲ್ಲಿ ಯಾವುದೇ ಹುರುಳಿಲ್ಲ, ಅಪೂರ್ಣವಾಗಿವೆ ಮತ್ತು ಮಾಧ್ಯಮಗಳಲ್ಲಿ ಪ್ರಕಟಗೊಂಡ ಆಧಾರ ರಹಿತ ಮಾಹಿತಿಯನ್ನು ಆಧರಿಸಿ ದೂರು ಸಲ್ಲಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ವದೆಹಲಿ: ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳಲ್ಲಿ ಯಾವುದೇ ಹುರುಳಿಲ್ಲ, ಅಪೂರ್ಣವಾಗಿವೆ ಮತ್ತು ಮಾಧ್ಯಮಗಳಲ್ಲಿ ಪ್ರಕಟಗೊಂಡ ಆಧಾರ ರಹಿತ ಮಾಹಿತಿಯನ್ನು ಆಧರಿಸಿ ದೂರು ಸಲ್ಲಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಈ ಸಂಬಂಧ ಸರ್ಕಾರ ತಜ್ನರ ಸಮಿತಿಯನ್ನು ರಚಿಸಲಿದ್ದು, ಆ ಸಮಿತಿ ಕೂಲಂಕಷವಾಗಿ ತನಿಖೆ ನಡೆಸಲಿದೆ ಎಂದಿde.
ಪೆಗಾಸಸ್ ಹಗರಣ ಕುರಿತಂತೆ ಸರ್ಕಾರದ ನಿಲುವನ್ನು ಈಗಾಗಲೇ ಸಂಸತ್ತಿನಲ್ಲಿ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಸ್ಪಷ್ಟಪಡಿಸಿದ್ದಾರೆ ಎಂದು ಕೇಂದ್ರ ಇದೇ ಸಂದರ್ಭದಲ್ಲಿ ತಿಳಿಸಿದೆ. ಮುಖ್ಯನ್ಯಾಯಮೂರ್ತಿ ಎನ್.ವಿ ರಮಣ, ಸೂರ್ಯಕಾಂತ್ ಮತ್ತುನಿರುದ್ಧ ಬೋಸ್ ಅವರನ್ನೊಳಗೊಂಡ ಸದಸ್ಯಪೀಠದೆದುರು ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದೆ.
ಕೇಂದ್ರ ಸರ್ಕಾರಕ್ಕೆ ಮಸಿ ಬಳಿಯಲು ದುರುದ್ದೇಶದಿಂದ ಸುಳ್ಳು ವಿಚಾರಗಳನ್ನು ಮಾಧ್ಯಮಗಳಲ್ಲಿ ಹರಿಬಿಡಲಾಗುತ್ತಿದೆ ಎಂದು ಕೇಂದ್ಫ್ರ ಅಭಿಪ್ರಾಯಪಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


