ಮಾಜಿ ಪ್ರಧಾನಿ ವಾಜಪೇಯಿ ಪುಣ್ಯಸ್ಮರಣೆ: ಗೌರವ ಸಲ್ಲಿಸಿದ ರಾಷ್ಟ್ರಪತಿ, ಪ್ರಧಾನಿ
ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 3ನೇ ವರ್ಷದ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಗೌರವ ಸಲ್ಲಿಸಿದರು.

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 3ನೇ ವರ್ಷದ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಗೌರವ ಸಲ್ಲಿಸಿದರು.
ಇಂದು ಮುಂಜಾನೆ ದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿ ‘ಸದೈವ್ ಅಟಲ್’ಗೆ ಭೇಟಿ ನೀಡಿ ಪುಷ್ಪಾರ್ಚನೆ ಮಾಡುವ ಮೂಲಕ ಅಗಲಿದ ನಾಯಕನಿಗೆ ಗೌರವ ಸಲ್ಲಿಸಿದರು.
ಇವರೊಂದಿಗೆ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಇತರೆ ಗಣ್ಯರು ಭೇಟಿ ನೀಡಿ ಗೌರವ ಸಲ್ಲಿಸಿದರು. ವಾಯಪೇಯಿ ಅವರ ಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ ಮತ್ತು ಮೊಮ್ಮಗಳಾದ ನಿಹಾರಿಕಾ ಕೂಡ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.
ದೀರ್ಘಕಾಲದ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ದೇಶದ ಪ್ರಮುಖ ನಾಯಕರಲ್ಲಿ ಒಬ್ಬರು ಮತ್ತು ಭಾರತೀಯ ಜನತಾ ಪಕ್ಷದ ಸ್ಥಾಪಕ ಸದಸ್ಯರಾದ ವಾಜಪೇಯಿ ಅವರು ಆಗಸ್ಟ್ 16, 2018 ರಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್) ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.
ಸಾಮಾಜಿಕ ಜಾಲತಾಣ ಟ್ವಿಟರ್ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ಅವರ ವ್ಯಕ್ತಿತ್ವ, ಪ್ರೀತಿಯ ಸ್ವಭಾವ, ಬುದ್ಧಿ ಹಾಗೂ ಹಾಸ್ಯಗಳನ್ನು ನೆನಪಿಸಿಕೊಳ್ಳುತ್ತಿದ್ದೇವೆ. ರಾಷ್ಟ್ರದ ಪ್ರಗತಿಗೆ ಅವರ ಕೊಡುಗೆಗಳನ್ನು ನೆನಪಿಸಿಕೊಳ್ಳುತ್ತಿದ್ದೇವೆ. ಅಟಲ್ ಜೀ ಅವರು ನಮ್ಮ ಜನರ ಹೃದಯ ಮತ್ತು ಮನಸ್ಸಿನಲ್ಲಿ ಸದಾ ವಾಸಿಸುತ್ತಿದ್ದಾರೆ. ಇಂದು, ಅವರ ಪುಣ್ಯ ತಿಥಿಯಾಗಿದ್ದು, ಸದೈವ ಅಟಲ್‌ಗೆ ಹೋಗಿ ಗೌರವ ಸಲ್ಲಿಸಲಾಯಿತು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


