'ತಾಲಿಬಾನಿ ಶೈಲಿಯಲ್ಲಿ' ತೃಣಮೂಲ ಕಾಂಗ್ರೆಸ್ ನಾಯಕರ ಮೇಲೆ ದಾಳಿ ಮಾಡಿ: ತ್ರಿಪುರಾ ಬಿಜೆಪಿ ಶಾಸಕ
ತೃಣಮೂಲ ಕಾಂಗ್ರೆಸ್ ನಾಯಕರನ್ನು ತಾಲಿಬಾನಿ ಶೈಲಿಯಲ್ಲಿ ಎದುರಿಸಬೇಕು ಎಂದು ಹೇಳುವ ಮೂಲಕ ತ್ರಿಪುರಾದ ಆಡಳಿತಾರೂಢ ಬಿಜೆಪಿ ಶಾಸಕರಾದ ಅರುಣ್ ಚಂದ್ರ ಭೌಮಿಕ್ ವಿವಾದವನ್ನು ಹುಟ್ಟುಹಾಕಿದ್ದಾರೆ.

ಅಗರ್ತಲಾ: ತೃಣಮೂಲ ಕಾಂಗ್ರೆಸ್ ನಾಯಕರನ್ನು ತಾಲಿಬಾನಿ ಶೈಲಿಯಲ್ಲಿ ಎದುರಿಸಬೇಕು ಎಂದು ಹೇಳುವ ಮೂಲಕ ತ್ರಿಪುರಾದ ಆಡಳಿತಾರೂಢ ಬಿಜೆಪಿ ಶಾಸಕರಾದ ಅರುಣ್ ಚಂದ್ರ ಭೌಮಿಕ್ ವಿವಾದವನ್ನು ಹುಟ್ಟುಹಾಕಿದ್ದಾರೆ.
ಇದು ಶಾಸಕರ ಹೇಳಿಕೆಯಾಗಿದ್ದು ಇದು ಬಿಜೆಪಿಯ ಮನಸ್ಥಿತಿಯಲ್ಲ ಎಂದು ಕೇಸರಿ ಶಿಬಿರವು ಹೇಳಿದೆ.
2023ರಲ್ಲಿ ತ್ರಿಪುರಾ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಪಕ್ಷ ಸಂಘಟನೆಗಾಗಿ ಗುಡ್ಡಗಾಡು ರಾಜ್ಯಕ್ಕೆ ಆಗಾಗ್ಗೆ ಭೇಟಿ ನೀಡುತ್ತಿರುವುದನ್ನು ಉದ್ದೇಶಿಸಿ ಅರುಣ್ ಚಂದ್ರ ಈ ಹೇಳಿಕೆ ನೀಡಿದ್ದಾರೆ.
25 ವರ್ಷಗಳ ಕಮ್ಯೂನಿಸ್ಟ್ ಆಡಳಿತವನ್ನು ಕೊನೆಗೊಳಿಸುವ ಮೂಲಕ ಅಧಿಕಾರಕ್ಕೆ ಬಂದ ತ್ರಿಪುರಾದ ಬಿಪ್ಲಬ್ ಕುಮಾರ್ ದೇಬ್ ನೇತೃತ್ವದ ಸರ್ಕಾರಕ್ಕೆ ಟಿಎಂಸಿ ಹಾನಿ ಮಾಡಲು ಪ್ರಯತ್ನಿಸುತ್ತಿದೆ. ಇವೆಲ್ಲವೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಪ್ರೇರಣೆಯಿಂದ ನಡೆಯುತ್ತಿದೆ ಎಂದು ಹೇಳಿದರು.
ಭೌಮಿಕ್ ದಕ್ಷಿಣ ತ್ರಿಪುರಾ ಜಿಲ್ಲೆಯ ಬೆಲೋನಿಯಾ ಹಳೆಯ ಟೌನ್ ಹಾಲ್‌ನಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರಾದ ಪ್ರತಿಮಾ ಭೌಮಿಕ್ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಈ ಹೇಳಿಕೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


