ದೇಶ

ಛತ್ತೀಸ್‌ಗಢದಲ್ಲಿ ನಕ್ಸಲ್ ದಾಳಿ: ಸಹಾಯಕ ಕಮಾಂಡೆಂಟ್ ಸೇರಿ ಇಬ್ಬರು ಐಟಿಬಿಪಿ ಸಿಬ್ಬಂದಿ ಹುತಾತ್ಮ

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದ ನಕ್ಸಲ್ ದಾಳಿಯಲ್ಲಿ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)ನ ಸಹಾಯಕ ಕಮಾಂಡೆಂಟ್ ಹಾಗೂ ಅವರ ಸಹೋದ್ಯೋಗಿಯೊಬ್ಬರು ಹುತಾತ್ಮರಾಗಿದ್ದಾರೆ.

ಛತ್ತೀಸ್‌ಗಢದಲ್ಲಿ ನಕ್ಸಲ್ ದಾಳಿ: ಸಹಾಯಕ ಕಮಾಂಡೆಂಟ್ ಸೇರಿ ಇಬ್ಬರು ಐಟಿಬಿಪಿ ಸಿಬ್ಬಂದಿ ಹುತಾತ್ಮ
ಸಾಂದರ್ಭಿಕ ಚಿತ್ರ
Published On :

ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದ ನಕ್ಸಲ್ ದಾಳಿಯಲ್ಲಿ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)ನ ಸಹಾಯಕ ಕಮಾಂಡೆಂಟ್ ಹಾಗೂ ಅವರ ಸಹೋದ್ಯೋಗಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಛೋಟೆಡೊಂಗರ್ ಪೊಲೀಸ್ ಠಾಣೆ ವ್ಯಾಪ್ತಿಯ ಐಟಿಬಿಪಿಯ 45ನೇ ಬೆಟಾಲಿಯನ್ ನ ಕಡಮೆಟ ಕ್ಯಾಂಪ್ ಬಳಿ ಮಧ್ಯಾಹ್ನ 12.10ರ ಸುಮಾರಿಗೆ ಈ ನಕ್ಸಲ್ ದಾಳಿ ನಡೆದಿದೆ ಎಂದು ಪೊಲೀಸ್ ಇನ್ಸ್ ಪೆಕ್ಟರ್(ಬಸ್ತಾರ್ ಶ್ರೇಣಿ) ಸುಂದರರಾಜ್ ಪಿ.ಅವರು ಹೇಳಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರದೇಶ ಪ್ರಾಬಲ್ಯ ಕಾರ್ಯಾಚರಣೆಯಲ್ಲಿದ್ದ ಐಟಿಬಿಪಿಯ 45ನೇ ಬೆಟಾಲಿಯನ್ ಸಿಬ್ಬಂದಿ ಮೇಲೆ ನಕ್ಸಲರ ಒಂದು ತಂಡ ಗುಂಡಿನ ದಾಳಿ ನಡೆಸಿದೆ. ಅದು ಶಿಬಿರದಿಂದ ಸರಿಸುಮಾರು 600 ಮೀಟರ್ ದೂರದಲ್ಲಿದೆ ಎಂದು ಅವರು ಹೇಳಿದರು.

ಐಟಿಬಿಪಿಯ 45 ನೇ ಬೆಟಾಲಿಯನ್‌ನ ಸಹಾಯಕ ಕಮಾಂಡೆಂಟ್ ಸುಧಾಕರ್ ಶಿಂಧೆ ಮತ್ತು ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಗುರುಮುಖ್ ಸಿಂಗ್ ಅವರು ಗುಂಡಿನ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ ಎಂದು ಐಜಿ ತಿಳಿಸಿದ್ದಾರೆ.

ದಾಳಿಯ ನಂತರ, ನಕ್ಸಲರು ಒಂದು ಎಕೆ -47 ರೈಫಲ್, ಎರಡು ಬುಲೆಟ್ ಪ್ರೂಫ್ ಜಾಕೆಟ್‌ಗಳು ಮತ್ತು ಭದ್ರತಾ ಸಿಬ್ಬಂದಿಯ ಒಂದು ವೈರ್‌ಲೆಸ್ ಸೆಟ್ ಲೂಟಿ ಮಾಡಿ ಪರಾರಿಯಾಗಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.