ದೇಶ

ರಾಜೀವ್ ಗಾಂಧಿ 77ನೇ ಜನ್ಮ ದಿನಾಚರಣೆ: ರಾಹುಲ್ ಸೇರಿದಂತೆ ಹಲವು ಗಣ್ಯರಿಂದ ಗೌರವ ನಮನ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 77ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ನವದೆಹಲಿಯ ವೀರ ಭೂಮಿಯಲ್ಲಿ ಕಾಂಗ್ರೆಸ್ ಮುಖಂಡ, ಲೋಕಸಭೆ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಸೇರಿದಂತೆ ಹಲವು ಮುಖಂಡರು ಗೌರವ ನಮನ ಸಲ್ಲಿಸಿದರು.

ರಾಜೀವ್ ಗಾಂಧಿ 77ನೇ ಜನ್ಮ ದಿನಾಚರಣೆ: ರಾಹುಲ್ ಸೇರಿದಂತೆ ಹಲವು ಗಣ್ಯರಿಂದ ಗೌರವ ನಮನ
ರಾಹುಲ್ ಗಾಂಧಿ
Published On :

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 77ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ನವದೆಹಲಿಯ ವೀರ ಭೂಮಿಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಲೋಕಸಭೆ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಸೇರಿದಂತೆ ಹಲವು ಮುಖಂಡರು ಗೌರವ ನಮನ ಸಲ್ಲಿಸಿದರು. 

ರಾಜೀವ್ ಗಾಂಧಿ ಅವರ ಜನ್ಮ ದಿನದಂದು ಅವರನ್ನು ನೆನಪಿಸಿಕೊಂಡಿರುವ ರಾಹುಲ್ ಗಾಂಧಿ, ಜಾತ್ಯಾತೀತ ಭಾರತ ಮಾತ್ರ ಬದುಕುಬಲ್ಲದು ಎಂದು ಫೇಸ್ ಬುಕ್ ನಲ್ಲಿ ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

1944 ಆಗಸ್ಟ್ 20 ರಂದು ಜನಿಸಿದ ರಾಜೀವ್ ಗಾಂಧಿ, ಅಕ್ಟೋಬರ್ 1984ರಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಪ್ರಧಾನಿ ಹುದ್ದೆ ಅಲಂಕರಿಸಿದ್ದರು. 1989 ಅಕ್ಟೋಬರ್ 2ರವರೆಗೆ ಅವರು ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು.  

ಮೇ 1991 ರಲ್ಲಿ ತಮಿಳುನಾಡಿನ ಪೆರಂಬೂರಿನಲ್ಲಿ ಚುನಾವಣಾ ರ‍್ಯಾಲಿ ಸಂದರ್ಭದಲ್ಲಿ ಎಲ್ ಟಿಟಿ ಸೂಸೈಡ್ ಬಾಂಬರ್ ನಿಂದ ಹತ್ಯೆಗೊಳಗಾಗಿದ್ದರು. ರಾಜೀವ್ ಗಾಂಧಿ ಅವರ ಜನ್ಮ ದಿನವನ್ನು ಸದ್ಭಾವನಾ ದಿನವನ್ನಾಗಿ ಕಾಂಗ್ರೆಸ್ ಆಚರಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.