ತಮಿಳುನಾಡಿನಲ್ಲಿ ಲಾಕ್‌ಡೌನ್ ಮತ್ತಷ್ಟು ಸಡಿಲ, ಸೋಮವಾರದಿಂದ ಚಿತ್ರಮಂದಿರಗಳು ಓಪನ್
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಶನಿವಾರ ಲಾಕ್‌ಡೌನ್ ಅನ್ನು ಮತ್ತಷ್ಟು ಸಡಿಲ ಮಾಡಿದ್ದು, ಇದನ್ನು ಸೆಪ್ಟೆಂಬರ್ 6 ರವರೆಗೆ ಎರಡು ವಾರಗಳವರೆಗೆ ವಿಸ್ತರಿಸಲಾಗಿದೆ.

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಶನಿವಾರ ಲಾಕ್‌ಡೌನ್ ಅನ್ನು ಮತ್ತಷ್ಟು ಸಡಿಲ ಮಾಡಿದ್ದು, ಇದನ್ನು ಸೆಪ್ಟೆಂಬರ್ 6 ರವರೆಗೆ ಎರಡು ವಾರಗಳವರೆಗೆ ವಿಸ್ತರಿಸಲಾಗಿದೆ.
ಸೆಪ್ಟೆಂಬರ್ 1 ರಿಂದ ಎಲ್ಲಾ ಕಾಲೇಜುಗಳು ಪುನರಾರಂಭವಾಗಲಿವೆ. ಆಗಸ್ಟ್ 23 ರಿಂದ ಶೇ. 50 ವೀಕ್ಷಕರೊಂದಿಗೆ ಸಿನಿಮಾ ಥಿಯೇಟರ್‌ಗಳು ಕಾರ್ಯನಿರ್ವಹಿಸಬಹುದು, ಬೀಚ್‌ಗಳನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ.
ಆಂಧ್ರಪ್ರದೇಶ ಮತ್ತು ಕರ್ನಾಟಕದಿಂದ ಸಾರ್ವಜನಿಕ ಸಾರಿಗೆಯನ್ನು ಪುನರಾರಂಭಿಸುವುದು ಸೇರಿದಂತೆ ಹಲವು ಪ್ರಮುಖ ಘೋಷಣೆಗಳನ್ನು ಸಿಎಂ ಮಾಡಿದ್ದಾರೆ.
ಸೆಪ್ಟೆಂಬರ್ 1 ರಿಂದ, 9, 10, 11 ಮತ್ತು 12 ತರಗತಿ ಶಾಲೆಗಳು ಪುನರಾರಂಭ.
ಸೆಪ್ಟೆಂಬರ್ 15 ರಿಂದ 1 ರಿಂದ 7 ನೇ ತರಗತಿಗಳನ್ನು ಆರಂಭಿಸುವ ಬಗ್ಗೆ ಸಮಾಲೋಚನೆಯ ನಂತರ ಪ್ರಕಟಣೆ ಹೊರಡಿಸಲಾಗುತ್ತದೆ.
ಎಲ್ಲಾ ಕಾಲೇಜುಗಳು ಸೆಪ್ಟೆಂಬರ್ 1 ರಿಂದ ರೊಟೇಷನ್ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತವೆ. ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಲಸಿಕೆ ಹಾಕಿಸಿರಬೇಕು.
ಸೆಪ್ಟೆಂಬರ್ 1 ರಿಂದ ಡಿಪ್ಲೊಮಾ ಕೋರ್ಸ್‌ಗಳು ಮತ್ತು ಪಾಲಿಟೆಕ್ನಿಕ್ ಕಾಲೇಜುಗಳು ಕಾರ್ಯನಿರ್ವಹಿಸಬಹುದು ಎಂದು ಸಿಎಂ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


