ದೆಹಲಿಯಲ್ಲಿ ಮುಂಜಾನೆಯಿಂದ ಧಾರಾಕಾರ ಮಳೆ, ತಗ್ಗು ಪ್ರದೇಶಗಳು ಜಲಾವೃತ!
ದೇಶದ ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ. ಮಿಂಟೊ ಬ್ರಿಗೇಡ್, ಮೂಲ್ಚಂದ್ ಅಂಡರ್ ಪಾಸ್, ಐಟಿಒ ಸೇರಿದಂತೆ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ವಾಹನ ಸವಾರರಿಗೆ, ಜನರಿಗೆ ತೀವ್ರ ತೊಂದರೆಯುಂಟಾಗಿದೆ.

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ. ಮಿಂಟೊ ಬ್ರಿಗೇಡ್, ಮೂಲ್ಚಂದ್ ಅಂಡರ್ ಪಾಸ್, ಐಟಿಒ ಸೇರಿದಂತೆ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ವಾಹನ ಸವಾರರಿಗೆ, ಜನರಿಗೆ ತೀವ್ರ ತೊಂದರೆಯುಂಟಾಗಿದೆ.
ಹಲವು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿರುವುದರಿಂದ ದೆಹಲಿ ಸಂಚಾರಿ ಪೊಲೀಸರು ಹಲವು ಪ್ರಮುಖ ಅಂಡರ್ ಪಾಸ್ ಗಳನ್ನು ಮುಚ್ಚಿದ್ದು ಸೋಷಿಯಲ್ ಮೀಡಿಯಾ ಮೂಲಕ ಜನರಿಗೆ ಮಾಹಿತಿ ನೀಡುತ್ತಿದ್ದಾರೆ.
ಸ್ಥಳದಲ್ಲಿರುವ ಲೋಕೋಪಯೋಗಿ ಇಲಾಖೆ ಸಿಬ್ಬಂದಿ, ಮಹಾ ನಗರ ಪಾಲಿಕೆ ಸಿಬ್ಬಂದಿ ನೀರು ನಿಂತು ಆಗಿರುವ ತೊಂದರೆಯನ್ನು ಸರಿಪಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಭಾರೀ ಮಳೆಯಿಂದಾಗಿ ಜಲಾವೃತಗೊಂಡ ಇತರ ಪ್ರದೇಶಗಳೆಂದರೆ ಪುಲ್ ಪ್ರಹ್ಲಾದಪುರ ಅಂಡರ್‌ಪಾಸ್, ಲಜಪತ್ ನಗರ, ಜಂಗಪುರ, ಐಟಿಒ, ಪ್ರಗತಿ ಮೈದಾನದ ಸುತ್ತಲಿನ ರಸ್ತೆಗಳು, ಸಂಗಮ್ ವಿಹಾರ್, ರೋಹ್ಟಕ್ ರಸ್ತೆ, ಮಂಗೋಲ್‌ಪುರಿ, ಕಿರರಿ ಮತ್ತು ಮಾಳವೀಯ ನಗರ ಸೇರಿವೆ. ದಕ್ಷಿಣ ದೆಹಲಿಯ ಮೆಹ್ರೌಲಿ-ಬದರ್‌ಪುರ್ ರಸ್ತೆಯಲ್ಲಿ ನೀರಿನ ಹರಿವಿನಿಂದಾಗಿ ಸಂಚಾರ ಸ್ಥಗಿತಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


