ದೇಶ

ಸುಪ್ರೀಂ ಕೋರ್ಟ್ ಎದುರು ದಂಪತಿಗಳ ಆತ್ಮಹತ್ಯೆ ಯತ್ನ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಸುಪ್ರೀಂಕೋರ್ಟ್ ಮುಂಭಾಗದಲ್ಲಿ ದಂಪತಿಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದಾರಂದು ಶನಿವಾರ ತಿಳಿದುಬಂದಿದೆ.

ಸುಪ್ರೀಂ ಕೋರ್ಟ್ ಎದುರು ದಂಪತಿಗಳ ಆತ್ಮಹತ್ಯೆ ಯತ್ನ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು
ಘಟನಾ ಸ್ಥಳದಲ್ಲಿ ಪೊಲೀಸರು
Published On :

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಸುಪ್ರೀಂಕೋರ್ಟ್ ಮುಂಭಾಗದಲ್ಲಿ ದಂಪತಿಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದಾರಂದು ಶನಿವಾರ ತಿಳಿದುಬಂದಿದೆ.    

ಆ.16 ರಂದು ಭಗವಾನ್ ದಾಸ್ ರಸ್ತೆಯಲ್ಲಿರುವ ಸುಪ್ರೀಂ ಕೋರ್ಟ್​ ಕಾಂಪ್ಲೆಕ್ಸ್​ ಎದುರಲ್ಲೇ ಗಂಡ-ಹೆಂಡತಿ ಇಬ್ಬರೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ದಂಪತಿಗಳು ಬೆಂಕಿ ಹಚ್ಚಿಕೊಂಡ ಕೂಡಲೇ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿಗಳು ಬೆಂಕಿ ನಂದಿಸಿ, ಪೊಲೀಸ್ ವ್ಯಾನ್​ನಲ್ಲಿ ರಾಮ್ ಮನೋಹರ್ ಲೂಹಿಯಾ ಆಸ್ಪತ್ರೆಗೆ ದಾಖಲಿಸಿದ್ದರು. 

ದಂಪತಿಗಳಿಬ್ಬರೂ ಸಾಕಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತಪಟ್ಟಿದ್ದಾನೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.