ದೇಶ

ರಕ್ಷಾ ಬಂಧನ್: ಮರಗಳಿಗೆ ರಾಖಿ ಕಟ್ಟಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್!

ರಕ್ಷಾ ಬಂಧನ್ ಆಚರಣೆ ಅಂಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮರಗಳಿಗೆ ರಾಖಿ ಕಟ್ಟಿದ್ದಾರೆ. ಪರಿಸರ ಸಂರಕ್ಷಣೆ ಕುರಿತು ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಜೆಡಿಯು ಪಕ್ಷದ ಮುಖ್ಯಸ್ಥರು ಆಗಿರುವ ನಿತೀಶ್ ಕುಮಾರ್ ಮರಗಳಿಗೆ ರಾಖಿ ಕಟ್ಟಿದ್ದಾರೆ.

ರಕ್ಷಾ ಬಂಧನ್: ಮರಗಳಿಗೆ ರಾಖಿ ಕಟ್ಟಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್!
ಮರಗಳಿಗೆ ರಾಖಿ ಕಟ್ಟುತ್ತಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್
Published On :

ಪಾಟ್ನಾ: ರಕ್ಷಾ ಬಂಧನ್ ಆಚರಣೆ ಅಂಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್  ಮರಗಳಿಗೆ ರಾಖಿ ಕಟ್ಟಿದ್ದಾರೆ. ಪರಿಸರ ಸಂರಕ್ಷಣೆ ಕುರಿತು ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಜೆಡಿಯು ಪಕ್ಷದ ಮುಖ್ಯಸ್ಥರು ಆಗಿರುವ ನಿತೀಶ್ ಕುಮಾರ್ ಮರಗಳಿಗೆ ರಾಖಿ ಕಟ್ಟಿದ್ದಾರೆ.

ಬಿಹಾರದಲ್ಲಿ ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ 2021ರಿಂದಲೂ ರಕ್ಷಾ ಬಂಧನ್ ಹಬ್ಬವನ್ನು 'ವೃಕ್ಷ ರಕ್ಷಾ ದಿವಸ್ ' ಆಗಿ ಎನ್ ಡಿಎ ನೇತೃತ್ವದ ಬಿಹಾರ ಸರ್ಕಾರ ಆಚರಿಸಿಕೊಂಡು ಬಂದಿದ್ದು, ಜನರು ಸಸಿಗಳನ್ನು ನೆಟ್ಟು, ಅವುಗಳನ್ನು ಕಾಪಾಡುವ ಮೂಲಕ ಪರಿಸರವನ್ನು ಸಂರಕ್ಷಿಸಬೇಕೆಂದು ನಿತೀಶ್ ಕುಮಾರ್ ಒತ್ತಾಯಿಸಿದ್ದಾರೆ.

ಜನರನ್ನು ಕಾಪಾಡುವಂತೆ ಮರಗಳನ್ನು ರಕ್ಷಿಸಬೇಕಾಗಿದೆ. ಸಸಿಗಳನ್ನು ನೆಡುವ ಮೂಲಕ ಪರಿಸರವನ್ನು ಸಂರಕ್ಷಿಸಬೇಕಾಗಿದೆ. ಜಲ ಜೀವನ್ ಹರಿಯಾಲಿ ಮಿಷನ್ ಅಡಿಯಲ್ಲಿ ರಾಜ್ಯ ಸರ್ಕಾರ ಸಸಿಗಳನ್ನು ನೆಡುವತ್ತಾ ಗಮನ ಕೇಂದ್ರೀಕರಿಸಿದೆ. ಮುಂದಿನ ಪೀಳಿಗೆಯು ಇದೀಗ ಪರಿಸರ ಸಂರಕ್ಷಣೆಯನ್ನು ಅರಿಯಬೇಕಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.