ದೇಶದಾದ್ಯಂತ ಸಂಭ್ರಮದ ರಕ್ಷಾ ಬಂಧನ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ
ದೇಶದಾದ್ಯಂತ ಜನರು ಅಣ್ಣ-ತಂಗಿಯರ ಪವಿತ್ರ ಹಬ್ಬವಾದ ರಕ್ಷಾ ಬಂಧನದ ಸಂಭ್ರಮದಲ್ಲಿದ್ದಾರೆ. ಆಗಸ್ಟ್ 22ರಂದು ಈ ಬಾರಿ ದೇಶದಲ್ಲಿ ರಾಖಿ ಹಬ್ಬ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.

ನವದೆಹಲಿ: ದೇಶದಾದ್ಯಂತ ಜನರು ಅಣ್ಣ-ತಂಗಿಯರ ಪವಿತ್ರ ಹಬ್ಬವಾದ ರಕ್ಷಾ ಬಂಧನದ ಸಂಭ್ರಮದಲ್ಲಿದ್ದಾರೆ. ಆಗಸ್ಟ್ 22ರಂದು ಈ ಬಾರಿ ದೇಶದಲ್ಲಿ ರಾಖಿ ಹಬ್ಬ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಮ ಟ್ವಿಟರ್ ಟ್ವೀಟ್ ಮಾಡಿರುವ ಪ್ರದಾನಿ ಮೋದಿಯವರು, ರಕ್ಷಾ ಬಂಧನದ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು ಎಂದು ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟ್ವೀೂಟ್ ಮಾಡಿ, ಜನತೆಗೆ ರಕ್ಷಾಬಂಧನದ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ, ನಾಡಿನ ಸಮಸ್ತ ಜನತೆಗೆ ರಕ್ಷಾ ಬಂಧನದ ಹಾರ್ದಿಕ ಶುಭಾಶಯಗಳು. ಸಹೋದರ ಸಹೋದರಿಯರ ಬಾಂಧವ್ಯದ ಸಂಕೇತವಾಗಿರುವ, ಭ್ರಾತೃತ್ವದ ಸಂಭ್ರಮಾಚರಣೆಯಾಗಿರುವ ರಕ್ಷಾ ಬಂಧನ ಎಲ್ಲರ ಸುಖ ಸಂತೋಷಗಳನ್ನು ನೂರ್ಮಡಿಗೊಳಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


