ಅಫ್ಘಾನಿಸ್ತಾನ ಬೆಳವಣಿಗೆಗಳ ಕುರಿತು ರಾಜಕೀಯ ಪಕ್ಷಗಳ ನಾಯಕರಿಗೆ ಕೇಂದ್ರ ಮಾಹಿತಿ
ಯುದ್ಧಪೀಡಿತ ಅಫ್ಘಾನಿಸ್ತಾನದ ಬೆಳವಣಿಗೆಗಳ ಕುರಿತು ವಿವಿಧ ರಾಜಕೀಯ ಪಕ್ಷಗಳ ಸಂಸದೀಯ ನಾಯಕರಿಗೆ ಕೇಂದ್ರ ಸರ್ಕಾರ ಮಾಹಿತಿ ನೀಡಲಿದೆ.

ನವದೆಹಲಿ: ಯುದ್ಧಪೀಡಿತ ಅಫ್ಘಾನಿಸ್ತಾನದ ಬೆಳವಣಿಗೆಗಳ ಕುರಿತು ವಿವಿಧ ರಾಜಕೀಯ ಪಕ್ಷಗಳ ಸಂಸದೀಯ ನಾಯಕರಿಗೆ ಕೇಂದ್ರ ಸರ್ಕಾರ ಮಾಹಿತಿ ನೀಡಲಿದೆ.
ವಿವಿಧ ರಾಜಕೀಯ ಪಕ್ಷಗಳ ಸಂಸದೀಯ ನಾಯಕರಿಗೆ ಅಫ್ಘಾನಿಸ್ತಾನ ಬೆಳವಣಿಗೆಗಳ ಕುರಿತು ಮಾಹಿತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ(ಎಂಇಎ) ಸೂಚನೆ ನೀಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ತಿಳಿಸಿದ್ದಾರೆ.
"ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಸಂಕ್ಷಿಪ್ತವಾಗಿ ರಾಜಕೀಯ ಪಕ್ಷಗಳ ಸಂಸದೀಯ ನಾಯಕರಿಗೆ ಮಾಹಿತಿ ನೀಡುವಂತೆ ಪ್ರಧಾನಿ ಮೋದಿ ಅವರು ಎಂಇಎಗೆ ಸೂಚಿಸಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಹೆಚ್ಚಿನ ವಿವರಗಳನ್ನು ನೀಡುತ್ತಾರೆ" ಎಂದು ಜೈಶಂಕರ್ ಅವರು ಟ್ವೀಟ್ ಮಾಡಿದ್ದಾರೆ.
ಅಫ್ಘಾನಿಸ್ತಾನದಿಂದ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆ ಕುರಿತು ಮತ್ತು ಆ ದೇಶದ ಪರಿಸ್ಥಿತಿಯ ಕುರಿತು ಕೇಂದ್ರ ಸರ್ಕಾರ ಮಾಹಿತಿ ನೀಡುವ ನಿರೀಕ್ಷೆ ಇದೆ.
ಅಫ್ಘಾನಿಸ್ತಾನದಿಂದ ಅಮೆರಿಕ ಪಡೆಗಳನ್ನು ಹಿಂತೆಗೆದುಕೊಂಡ ನಂತರ ತಾಲಿಬಾನ್, ಕಾಬೂಲ್ ಸೇರಿದಂತೆ ಅಫ್ಘಾನಿಸ್ತಾನದ ಬಹುತೇಕ ಎಲ್ಲಾ ಪ್ರಮುಖ ಪಟ್ಟಣಗಳು ಮತ್ತು ನಗರಗಳ ಮೇಲೆ ಹಿಡಿತ ಸಾಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


