ದೇಶ

ಮಹಾ ಸಿಎಂ ಠಾಕ್ರೆ 'ಕಪಾಳಕ್ಕೆ ಬಾರಿಸುತ್ತಿದ್ದೆ' ಹೇಳಿಕೆ: ಕೇಂದ್ರ ಸಚಿವ ನಾರಾಯಣ ರಾಣೆ ವಿರುದ್ಧ ಬಂಧನ ವಾರಂಟ್

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರ ವಿರುದ್ಧ ನಾಶಿಕ್ ಪೊಲೀಸ್ ಆಯುಕ್ತ ದೀಪಕ್ ಪಾಂಡೆ ಅವರು...

ಮಹಾ ಸಿಎಂ ಠಾಕ್ರೆ 'ಕಪಾಳಕ್ಕೆ ಬಾರಿಸುತ್ತಿದ್ದೆ' ಹೇಳಿಕೆ: ಕೇಂದ್ರ ಸಚಿವ ನಾರಾಯಣ ರಾಣೆ ವಿರುದ್ಧ ಬಂಧನ ವಾರಂಟ್
ನಾರಾಯಣ ರಾಣೆ
Published On :

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರ ವಿರುದ್ಧ ನಾಶಿಕ್ ಪೊಲೀಸ್ ಆಯುಕ್ತ ದೀಪಕ್ ಪಾಂಡೆ ಅವರು ಮಂಗಳವಾರ ಬಂಧನ ವಾರಂಟ್ ಜಾರಿಗೊಳಿಸಿದ್ದಾರೆ.

ವಾರಂಟ್ ಜಾರಿಯಾಗುತ್ತಿದಂತೆ ಇಂದು ಬೆಳಗ್ಗೆ ನಾಸಿಕ್ ಪೊಲೀಸ್ ತಂಡ, ಕೇಂದ್ರ ಸಚಿವ ರಾಣೆ ಅವರನ್ನು ಬಂಧಿಸಲು ಅವರು ಪ್ರಸ್ತುತ ಜನ ಆಶೀರ್ವಾದ ಯಾತ್ರೆ ನಡೆಸುತ್ತಿರುವ ರತ್ನಗಿರಿ ಜಿಲ್ಲೆಗೆ ತೆರಳಿದ್ದಾರೆ.

ಈ ಮಧ್ಯೆ ರಾಣೆ ಅವರು ಸಿಎಂ ವಿರುದ್ಧದ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ತಾವು ಸಿಎಂ ವಿರುದ್ಧ ಹೇಳಿಕೆ ನೀಡುವ ಮೂಲಕ ಯಾವುದೇ ಅಪರಾಧ ಮಾಡಿಲ್ಲ ಎಂದು ಹೇಳಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು ಯಾವ ವರ್ಷ ಎಂಬುದನ್ನು ತಿಳಿಯದೇ ಇರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರ
ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ಸೋಮವಾರ ರಾಯಗಡದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ನಾರಾಯಣ ರಾಣೆ ಹೇಳಿದ್ದರು.

ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಧ್ವಜಾರೋಹಣ ನಡೆಸಿ ಭಾಷಣ ಮಾಡುತ್ತಿದ್ದ ವೇಳೆ ಸ್ವಾತಂತ್ರ್ಯ ಲಭಿಸಿದ ವರ್ಷವನ್ನು ಪಕ್ಕದವರಿಂದ ಕೇಳಿ ತಿಳಿದುಕೊಂಡು ಹೇಳಿದ್ದರು. ಇದನ್ನು ಉಲ್ಲೇಖಿಸಿ ರಾಣೆ ಹೇಳಿಕೆ ನೀಡಿದ್ದರು.

ರಾಣೆ ಹೇಳಿಕೆಗೆ ಶಿವಸೇನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸಚಿವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.