ಅಫ್ಘಾನಿಸ್ತಾನದಿಂದ ಭಾರತೀಯರ ಸ್ಥಳಾಂತರಕ್ಕೆ ಮೊದಲ ಆದ್ಯತೆ: ಜೈಶಂಕರ್
ಯುದ್ಧ ಪೀಡಿತ ಸನ್ನಿವೇಶ, ರಾಜಕೀಯಅನಿಶ್ಚಿತತೆ ಸೃಷ್ಟಿಯಾಗಿರುವ ಅಫ್ಘಾನಿಸ್ತಾನದಿಂದ ಭಾರತೀಯರನ್ನು ಸ್ಥಳಾಂತರಿಸುವುದು ಮೊದಲ ಆದ್ಯತೆಯಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.

ನವದೆಹಲಿ: ಯುದ್ಧ ಪೀಡಿತ ಸನ್ನಿವೇಶ, ರಾಜಕೀಯಅನಿಶ್ಚಿತತೆ ಸೃಷ್ಟಿಯಾಗಿರುವ ಅಫ್ಘಾನಿಸ್ತಾನದಿಂದ ಭಾರತೀಯರನ್ನು ಸ್ಥಳಾಂತರಿಸುವುದು ಮೊದಲ ಆದ್ಯತೆಯಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.
ಅಫ್ಘಾನಿಸ್ತಾನದ ಬೆಳವಣಿಗೆಗಳ ಕುರಿತು ವಿವಿಧ ರಾಜಕೀಯ ಪಕ್ಷಗಳ ಸಂಸದೀಯ ನಾಯಕರಿಗೆ ಮಾಹಿತಿ ನೀಡಲು ಕರೆಯಲಾಗಿದ್ದ ಸಭೆಯಲ್ಲಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಅಫ್ಘಾನಿಸ್ತಾನದಿಂದ ಸಾಧ್ಯವಾದಷ್ಟು ಜನರನ್ನು ಭಾರತಕ್ಕೆ ಕರೆತರಲು ಪ್ರಯತ್ನಿಸಲಾಗುತ್ತಿದೆ. ಭಾರತೀಯ ಪ್ರಜೆಗಳ ಸ್ಥಳಾಂತರ ಮೊದಲ ಆದ್ಯತೆ ಎಂದರು.
ಯುದ್ಧ ಪೀಡಿತ ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ದೋಹಾ ಒಪ್ಪಂದದ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ತಾಲಿಬಾನ್ ಉಲ್ಲಂಘಿಸಿದ್ದಾರೆ ಎಂದು ಅವರು ಹೇಳಿದರು.
ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ಅಮೆರಿಕ ಮತ್ತು ತಾಲಿಬಾನ್ ಮುಖಂಡರ ನಡುವಣ ನಡೆದ ದೋಹಾ ಶಾಂತಿ ಒಪ್ಪಂದದಲ್ಲಿ ಕಾಬೂಲ್ ಸರ್ಕಾರ ಅಫ್ಘಾನಿಸ್ತಾನದ ಎಲ್ಲಾ ವರ್ಗದ ಜನರನ್ನು ಪ್ರತಿನಿಧಿಸುವುದು, ಧಾರ್ಮಿಕ ಸ್ವಾತಂತ್ರ ಹಾಗೂ ಪ್ರಜಾಪ್ರಭುತ್ವಕ್ಕೆ ಅವಕಾಶ ಕಲ್ಪಿಸುವುದು ಸೇರಿದಂತೆ ಮತ್ತಿತರ ಅನೇಕ ಭರವಸೆಗಳನ್ನು ನೀಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


