ದೇಶ

ಪತ್ನಿಯ ಗುಪ್ತಾಂಗವನ್ನೇ ಹೊಲಿದ ಪತಿ, ಭೀಕರ ಕೃತ್ಯ ನಡೆದಿದ್ದೆಲ್ಲಿ ಗೊತ್ತಾ?

ಅನುಮಾನ ಎಂಬ ಪೆಡಂಭೂತ ಒಮ್ಮೆ ತಲೆಗೆ ಹೊಕ್ಕರೆ ಏನೆಲ್ಲಾ ಆಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಹೌದು ಪತ್ನಿಯ ಶೀಲ ಶಂಕಿಸಿ ಪತಿ ಆಕೆಯ ಗುಪ್ತಾಂಗವನ್ನೇ ಹೊಲಿದು ಹಾಕಿದ್ದಾನೆ.

ಪತ್ನಿಯ ಗುಪ್ತಾಂಗವನ್ನೇ ಹೊಲಿದ ಪತಿ, ಭೀಕರ ಕೃತ್ಯ ನಡೆದಿದ್ದೆಲ್ಲಿ ಗೊತ್ತಾ?
ಸಂಗ್ರಹ ಚಿತ್ರ
Published On :

ಸಿಂಗ್ರೌಲಿ (ಮಧ್ಯಪ್ರದೇಶ): ಅನುಮಾನ ಎಂಬ ಪೆಡಂಭೂತ ಒಮ್ಮೆ ತಲೆಗೆ ಹೊಕ್ಕರೆ ಏನೆಲ್ಲಾ ಆಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಹೌದು ಪತ್ನಿಯ ಶೀಲ ಶಂಕಿಸಿ ಪತಿ ಆಕೆಯ ಗುಪ್ತಾಂಗವನ್ನೇ ಹೊಲಿದು ಹಾಕಿದ್ದಾನೆ. 

ಆಘಾತಕಾರಿ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯ ರೈಲಾ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಪತ್ನಿ ಆರೋಪಿಯ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಅಸಿಸ್ಟೆಂಟ್ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಸೋನ್ಕಾರ್ ಹೇಳಿದ್ದಾರೆ. 

ದೂರು ದಾಖಲಾಗುತ್ತಿದ್ದಂತೆ ಆರೋಪಿ ಪತಿ ತಲೆ ಮರೆಸಿಕೊಂಡಿದ್ದಾನೆ. ಆರೋಪಿಯ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ. ಗಂಡನಿಂದ ಚಿತ್ರಹಿಂಸೆ ಅನುಭವಿಸಿದ್ದರೂ ಸಹ ಪತ್ನಿ ಆತನಿಗೆ ಕಠಿಣ ಕ್ರಮ ತೆಗೆದುಕೊಳ್ಳದಂತೆ ಮನವಿ ಮಾಡಿದ್ದಾಗಿ ಅನಿಲ್ ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.