ಮನಿ ಲಾಂಡರಿಂಗ್ ಪ್ರಕರಣ: ಶಿವಸೇನಾ ಸಂಸದೆ ಭಾವನಾ ಗಾವಳಿ ಮನೆ, ಕಚೇರಿ ಮೇಲೆ ಇಡಿ ದಾಳಿ
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ಮಹಾರಾಷ್ಟ್ರದ ಶಿವಸೇನೆ ಸಂಸದೆ ಭಾವನಾ ಗವಳಿಗೆ ಅವರಿಗೆ ಸಂಬಂಧಪಟ್ಟ ಅನೇಕ ಸ್ಥಳಗಳ ಮೇಲೆ ದಾಳಿ ನಡೆಸಿದೆ...

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ಮಹಾರಾಷ್ಟ್ರದ ಶಿವಸೇನೆ ಸಂಸದೆ ಭಾವನಾ ಗವಳಿಗೆ ಅವರಿಗೆ ಸಂಬಂಧಪಟ್ಟ ಅನೇಕ ಸ್ಥಳಗಳ ಮೇಲೆ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮನಿ ಲಾಂಡರಿಂಗ್ ಕಾನೂನು(ಪಿಎಂಎಲ್‌ಎ) ಅಡಿಯಲ್ಲಿ ಯಾವತ್ಮಾಲ್-ವಾಶಿಮ್ ಲೋಕಸಭಾ ಕ್ಷೇತ್ರದ ಸಂಸದರ ಮನೆ, ಕಚೇರಿ ಸೇರಿದಂತೆ ಅವರಿಗೆ ಸಂಬಂಧಪಟ್ಟ ಕನಿಷ್ಠ ಏಳು ಸ್ಥಳಗಳ ಮೇಲೆ ದಾಳಿ ನಡೆಸಿ, ಶೋಧ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.
ಮಹಾರಾಷ್ಟ್ರ ಪೊಲೀಸ್ ಎಫ್‌ಐಆರ್ ಅನ್ನು ಆಧರಿಸಿ 18 ಕೋಟಿ ರೂಪಾಯಿ ವಂಚನೆ ಮತ್ತು ಇತರ ಅಕ್ರಮಗಳಿಗೆ ಸಂಬಂಧಿಸಿದಂತೆ ಇಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದೆ.
ವಾಶಿಮ್, ಮುಂಬೈ ಮತ್ತು ಇತರ ಕೆಲವು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


