ಕೋವಿಡ್-19: ಕಳೆದ 24 ಗಂಟೆ ಅವಧಿಯಲ್ಲಿ ದೇಶಾದ್ಯಂತ 42,909 ಹೊಸ ಪ್ರಕರಣ ಪತ್ತೆ, 380 ಮಂದಿ ಸಾವು
ಕೋವಿಡ್ ಮೂರನೇ ಅಲೆಯ ಭೀತಿಯ ನಡುವೆಯೇ ಇಂದು ದೇಶದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಅಲ್ಪ ಏರಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 42,909 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ.

ನವದೆಹಲಿ: ಕೋವಿಡ್ ಮೂರನೇ ಅಲೆಯ ಭೀತಿಯ ನಡುವೆಯೇ ಇಂದು ದೇಶದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಅಲ್ಪ ಏರಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 42,909 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 42,909 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು,ದೇಶದಲ್ಲಿ ಪತ್ತೆಯಾದ ದೈನಂದಿನ ಪ್ರಕರಣಗಳ ಪೈಕಿ ಶೇ.50ಕ್ಕೂ ಹೆಚ್ಚು ಪ್ರಕರಣಗಳು ಕೇರಳದಲ್ಲಿ ವರದಿಯಾಗಿದ್ದು, ಗರಿಷ್ಠ ಅಂದರೆ 29,836 ಸೋಂಕು ಪ್ರಕರಣಗಳ ಪತ್ತೆಯಾಗಿದೆ.

ಅಂತೆಯೇ ಇದೇ ಅವಧಿಯಲ್ಲಿ 34,763 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಗುಣಮುಖರ ಸಂಖ್ಯೆ 3,19,23,405 ಕ್ಕೆ ಏರಿಕೆಯಾಗಿದೆ.
ಅಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 380 ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಬಲಿಯಾದವರ ಸಂಖ್ಯೆ 4,38,210ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 3,76,324 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇಲ್ಲಿಯ ವರೆಗೂ ದೇಶದಲ್ಲಿ 52.01 ಕೋಟಿ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, 63.43 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


