ಉದ್ಧವ್ ಕಪಾಳಕ್ಕೆ ಬಾರಿಸುತ್ತಿದ್ದೆ ಹೇಳಿಕೆ: ಪೊಲೀಸ್ ವಿಚಾರಣೆ ರಾಣೆ ಗೈರು; ಅವರ ಆರೋಗ್ಯ ಸರಿ ಇಲ್ಲ ಎಂದ ವಕೀಲ!
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರು ಪ್ರಕರಣ ಸಂಬಂಧ ರಾಯಗಡ ಪೊಲೀಸರ ವಿಚಾರಣೆಗೆ ಗೈರು ಆಗಿದ್ದಾರೆ.

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರು ಪ್ರಕರಣ ಸಂಬಂಧ ರಾಯಗಡ ಪೊಲೀಸರ ವಿಚಾರಣೆಗೆ ಗೈರು ಆಗಿದ್ದಾರೆ.
ಕೇಂದ್ರ ಸಚಿವ ನಾರಾಯಣ ರಾಣೆ ಅವರು ಕೋರ್ಟ್ ಆದೇಶದಂತೆ ಇಂದು ರಾಯಗಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು ವಿಚಾರಣೆ ಹಾಜರಾಗಿಲ್ಲ ಎಂದು ಅವರ ವಕೀಲರು ತಿಳಿಸಿದ್ದಾರೆ.
ರಾಣೆ ಪರವಾಗಿ ಅವರ ವಕೀಲ ಸಂದೇಶ್ ಚಿಕ್ನೆ ಅವರು ಸ್ಥಳೀಯ ಅಪರಾಧ ವಿಭಾಗದ ಇನ್ಸ್ಪೆಕ್ಟರ್ ದಯಾನಂದ ಗಾವಡೆ ಅವರ ಕಚೇರಿಯಲ್ಲಿ ಹಾಜರಾಗಿ, ಆರೋಪಿ ಕೇಂದ್ರ ಸಚಿವರ ಆರೋಗ್ಯ ಸರಿಯಿಲ್ಲದ ಕಾರಣ ವಿಚಾರಣೆಗೆ ಬರಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.
ಇಂದು ಬೆಳಗ್ಗೆ ರಾಣೆ ಆಗಮನದ ನಿರೀಕ್ಷೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಬಳಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು, ಈಗ ಪರಿಸ್ಥಿತಿ ಸಾಮಾನ್ಯವಾಗಿದೆ ಎಂದು ಗಾವಡೆ ಹೇಳಿದರು.
ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು ಯಾವ ವರ್ಷ ಎಂಬುದನ್ನು ತಿಳಿಯದೇ ಇರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ರಾಯಗಡದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ನಾರಾಯಣ ರಾಣೆ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


