ಮತ್ತೆ ಟಿಎಂಸಿಗೆ ಮರಳಿದ ಬಿಜೆಪಿ ಶಾಸಕ ಬಿಸ್ವಜಿತ್ ದಾಸ್
ಬಾಗ್ದಾ ಬಿಜೆಪಿ ಶಾಸಕ ಬಿಸ್ವಜಿತ್ ದಾಸ್ ಅವರು ಮಂಗಳವಾರ ಮತ್ತೆ ಟಿಎಂಸಿ ಸೇರ್ಪಡೆಯಾಗಿದ್ದಾರೆ. ಇದರೊಂದಿಗೆ ಕಳೆದ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ...

ಕೋಲ್ಕತ್ತಾ: ಬಾಗ್ದಾ ಬಿಜೆಪಿ ಶಾಸಕ ಬಿಸ್ವಜಿತ್ ದಾಸ್ ಅವರು ಮಂಗಳವಾರ ಮತ್ತೆ ಟಿಎಂಸಿ ಸೇರ್ಪಡೆಯಾಗಿದ್ದಾರೆ. ಇದರೊಂದಿಗೆ
ಕಳೆದ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಕೇಸರಿ ಪಕ್ಷ ತೊರೆಯುತ್ತಿರುವ ಮೂರನೇ ಶಾಸಕರಾಗಿದ್ದಾರೆ.
ಟಿಎಂಸಿಯಿಂದ ಎರಡು ಬಾರಿ ಶಾಸಕರಾಗಿದ್ದ ದಾಸ್ 2019ರಲ್ಲಿ ಬಿಜೆಪಿ ಸೇರಿದ್ದರು. ಅವರು 2021ರ ವಿಧಾನಸಭಾ ಚುನಾವಣೆಯಲ್ಲಿ ಬಾಗ್ದಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದಾರೆ.
ಇಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ಪಾರ್ಥ ಚಟರ್ಜಿ ಸಮ್ಮುಖದಲ್ಲಿ ಟಿಎಂಸಿ ಸೇರಿದ ನಂತರ ಮಾತನಾಡಿದ ದಾಸ್, "ನಾನು ಬಿಜೆಪಿಯಲ್ಲಿ ಎಂದಿಗೂ ಹಾಯಾಗಿರಲಿಲ್ಲ. ನಾನು ಬಹಳ ಹಿಂದೆಯೇ ಟಿಎಂಸಿಗೆ ಮರಳಲು ಬಯಸಿದ್ದೆ. ಬಿಜೆಪಿ ಬಂಗಾಳಕ್ಕೆ ಏನೂ ಮಾಡಿಲ್ಲ" ಎಂದು ಆರೋಪಿಸಿದರು.
ಕಳೆದ ಸೋಮವಾರ ಮತ್ತೊಬ್ಬ ಬಿಜೆಪಿ ಶಾಸಕ ತನ್ಮಯ್ ಘೋಷ್ ಅವರು ಟಿಎಂಸಿಗೆ ಮರಳಿದ್ದರು. ಈ ಹಿಂದೆ, ಜೂನ್ ನಲ್ಲಿ, ಬಿಜೆಪಿ ಶಾಸಕ ಮತ್ತು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಅವರು ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವನ್ನು ತೊರೆದು ನಾಲ್ಕು ವರ್ಷಗಳ ನಂತರ ಮತ್ತೆ ಟಿಎಂಸಿಗೆ ಸೇರಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


