ದೇಶ

ದೇಶದಲ್ಲಿ ಮಂಗಳವಾರ ಒಂದೇ ದಿನ 1.1 ಕೋಟಿ ಜನರಿಗೆ ಕೋವಿಡ್ ಲಸಿಕೆ: ಕೇಂದ್ರ ಸರ್ಕಾರ

ದೇಶದಲ್ಲಿ ಮಂಗಳವಾರ ಒಂದೇ ದಿನ ಸುಮಾರು 1.1 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಕಳೆದ ಐದು ದಿನಗಳಲ್ಲಿ ಎರಡನೇ ಬಾರಿಗೆ ಒಂದು ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಮಂಗಳವಾರ ಒಂದೇ ದಿನ 1.1 ಕೋಟಿ ಜನರಿಗೆ ಕೋವಿಡ್ ಲಸಿಕೆ: ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿ ಮಂಗಳವಾರ ಒಂದೇ ದಿನ ಸುಮಾರು 1.1 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಕಳೆದ ಐದು ದಿನಗಳಲ್ಲಿ ಎರಡನೇ ಬಾರಿಗೆ ಒಂದು ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ.

ಮಂಗಳವಾರ ಸಂಜೆ 6 ಗಂಟೆಯವರೆಗೆ ದೇಶದಲ್ಲಿ ಒಂದೇ ದಿನ ದಾಖಲೆಯ 1.09 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಇದು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿರುವುದಾಗಿ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ತಿಳಿಸಿದ್ದಾರೆ.

ಈವರೆಗೆ ರಾಜ್ಯಗಳಿಗೆ ಸುಮಾರು 64.36 ಕೋಟಿ ಡೋಸ್ ಲಸಿಕೆಯನ್ನು ಉಚಿತವಾಗಿ ಪೂರೈಸಲಾಗಿದೆ. ರಾಜ್ಯ ನೇರ ಖರೀದಿ ಹಂತದಲ್ಲಿ ಸುಮಾರು 1.5 ಕೋಟಿಗೂ ಹೆಚ್ಚು ಡೋಸ್ ಪೂರೈಕೆಗಾಗಿ ಪೈಪ್ ಲೈನ್ ನಲ್ಲಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

5,42,30,546 ಡೋಸ್ ಕೋವಿಡ್ ಲಸಿಕೆ ಇನ್ನೂ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದೆ ಲಭ್ಯವಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.