ಅಫ್ಘಾನಿಸ್ತಾನ ಪರಿಸ್ಥಿತಿ ಕುರಿತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಚರ್ಚೆ
ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚಾರ್ಲ್ಸ್ ಮೈಕೆಲ್ ಜೊತೆಗೆ ಅಪ್ಘಾನಿಸ್ತಾನ ಪರಿಸ್ಥಿತಿ ಕುರಿತು ದೂರವಾಣಿ ಮೂಲಕ ಚರ್ಚಿಸಿದ್ದು, ಭಾರತ- ಯುರೋಪಿಯನ್ ಸಂಬಂಧ ಮತ್ತಷ್ಟು ಬಲವರ್ದನೆಗೆ ಭಾರತದ ಬದ್ಧತೆಗೆ ಪುನರುಚ್ಚರಿಸಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚಾರ್ಲ್ಸ್ ಮೈಕೆಲ್ ಜೊತೆಗೆ ಅಪ್ಘಾನಿಸ್ತಾನ ಪರಿಸ್ಥಿತಿ ಕುರಿತು ದೂರವಾಣಿ ಮೂಲಕ ಚರ್ಚಿಸಿದ್ದು, ಭಾರತ- ಯುರೋಪಿಯನ್ ಸಂಬಂಧ ಮತ್ತಷ್ಟು ಬಲವರ್ದನೆಗೆ ಭಾರತದ ಬದ್ಧತೆಗೆ ಪುನರುಚ್ಚರಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ, ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರ ಜೊತೆಗೆ ಅಪ್ಘಾನಿಸ್ತಾನದಲ್ಲಿನ ಪರಿಸ್ಥಿತಿ ಕುರಿತಂತೆ ಚರ್ಚಿಸಿರುವುದಾಗಿ ತಿಳಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಉಭಯ ದೇಶಗಳ ಮುಖಂಡರು ಚರ್ಚಿಸಿದ್ದು, ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಪೈಶಾಚಿಕ ದಾಳಿಯನ್ನು ಖಂಡಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಸುರಕ್ಷತೆ ಮತ್ತು ಸ್ಥಿರತೆಯ ಪ್ರಾಮುಖ್ಯತೆಯನ್ನು ಉಭಯ ನಾಯಕರು ಪ್ರತಿಪಾದಿಸಿದ್ದು, ಈ ನಿಟ್ಟಿನಲ್ಲಿ ಭಾರತ ಹಾಗೂ ಯುರೋಪಿಯನ್ ಕೌನ್ಸಿಲ್ ಪಾತ್ರದ ಕುರಿತಂತೆ ಚರ್ಚೆ ನಡೆಸಿದ್ದಾರೆ. ದ್ವಿಪಕ್ಷೀಯ ಮತ್ತು ಜಾಗತಿಕ ವಿಚಾರಗಳು ಅದರಲ್ಲೂ ಅಫ್ಘಾನಿಸ್ತಾನದಲ್ಲಿನ ಪರಿಸ್ಥಿತಿ ಕುರಿತಂತೆ ನಿಕಟ ಸಂಪರ್ಕದಲ್ಲಿರುವ ಉಭಯ ನಾಯಕರು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


