ಬಿಕನೇರ್ನಲ್ಲಿ ಟ್ರಕ್-ಕ್ರೂಸರ್ ನಡುವೆ ಭೀಕರ ಅಪಘಾತ; 11 ಮಂದಿ ದುರ್ಮರಣ, 7 ಜನರಿಗೆ ಗಾಯ
ಟ್ರಕ್ ಹಾಗೂ ಕ್ರೂಸರ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ 11 ಮಂದಿ ದುರ್ಮರಣವನ್ನಪ್ಪಿರುವ ಘಟನೆ ನಾಗೌರ್ನಲ್ಲಿ ಮಂಗಳವಾರ ನಡೆದಿದೆ.

ಬಿಕನೇರ್: ಟ್ರಕ್ ಹಾಗೂ ಕ್ರೂಸರ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ 11 ಮಂದಿ ದುರ್ಮರಣವನ್ನಪ್ಪಿರುವ ಘಟನೆ ನಾಗೌರ್ನಲ್ಲಿ ಮಂಗಳವಾರ ನಡೆದಿದೆ.
ದುರಂತದಲ್ಲಿ 7 ಮಂದಿ ಗಾಯಗೊಂಡಿದ್ದು, ಬಿಕನೇರ್ನ ನೋಖಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗೌರ್ನ ಬಿಕನೇರ್-ಜೋಧ್ಪುರ ಹೆದ್ದಾರಿಯಲ್ಲಿ ನಡೆದಿರುವ ಅಪಘಾತದಲ್ಲಿ ಸ್ಥಳದಲ್ಲೇ 8 ಮಂದಿ ಮೃತಪಟ್ಟರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೂವರು ಅಸುನೀಗಿದರು.
ಕ್ರೂಸರ್ನಲ್ಲಿದ್ದ ಎಲ್ಲರೂ ಮಧ್ಯಪ್ರದೇಶದ ಸಜ್ಜನಖೇಡವ್ನ ದೌಲತ್ಪುರ ನಿವಾಸಿಗಳು ಎನ್ನಲಾಗಿದೆ. ದುರಂತದ ಬಳಿಕ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ನೋಖಾದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


