ತಾಯಿ, ಮಗಳ ಮೇಲೆ ಕಬ್ಬಿಣದ ರಾಡು, ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ! ಸಿಸಿಟಿವಿಯಲ್ಲಿ ಸೆರೆ
ರಾಷ್ಟ್ರ ರಾಜಧಾನಿಯಲ್ಲಿ 38 ವರ್ಷದ ಮಹಿಳೆ ಹಾಗೂ ಆಕೆಯ ಪುತ್ರಿಯ ಮೇಲೆ ಗುಂಪೊಂದು ಕಬ್ಬಿಣದ ರಾಡು ಹಾಗೂ ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದೆ. ಸಿಸಿಟಿವಿಯಲ್ಲಿ ಈ ಭಯಾನಕ ಹಲ್ಲೆಯ ದೃಶ್ಯ ಸೆರೆಯಾಗಿದೆ.

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ 38 ವರ್ಷದ ಮಹಿಳೆ ಹಾಗೂ ಆಕೆಯ ಪುತ್ರಿಯ ಮೇಲೆ ಗುಂಪೊಂದು ಕಬ್ಬಿಣದ ರಾಡು ಹಾಗೂ ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದೆ. ಸಿಸಿಟಿವಿಯಲ್ಲಿ ಈ ಭಯಾನಕ ಹಲ್ಲೆಯ ದೃಶ್ಯ ಸೆರೆಯಾಗಿದೆ. ಕಾರಿನಿಂದ ಇಳಿದು ಬರುವ ಮಗಳು ಹಾಗೂ ತಾಯಿಯನ್ನು ಅಡ್ಡಗಟ್ಟಿದ್ದ ಗುಂಪೊಂದು ಮಾರಕಾಸ್ತ್ರಗಳಿಂದ ಮನಬಂದಂತೆ ಥಳಿಸುವ ದೃಶ್ಯ ವಿಡಿಯೋದಲ್ಲಿದೆ.
ದೆಹಲಿಯ ಶಾಲಿಮರ್ ಬಾಗ್ ರೆಸಿಡೆನ್ಶಿಯಲ್ ಕಾಲೋನಿಯಲ್ಲಿ ಕಳೆದ ತಿಂಗಳು 19 ರಂದು ಈ ಘಟನೆ ನಡೆದಿದ್ದು, ಇದಕ್ಕೆ ಕಾರಣರಾಗಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳ ಬಂಧನಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಎಪಿ ಶಾಸಕ ಬಂಧನ ಕುಮಾರಿ ಅವರ ಬೆಂಬಲಿಗರಿಂದ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ. ಶಾಸಕಿ ಬಂಧನ ಕುಮಾರಿ ಅವರ ಪತಿ ವಿರುದ್ಧ 2019ರಲ್ಲಿ ಎಫ್ ಐಆರ್ ದಾಖಲಿಸಿದ್ದಕ್ಕಾಗಿ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹಲ್ಲೆಗೊಳಗಾದ ಮಹಿಳೆ ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ಶಾಸಕಿ ಬಂಧನ ಕುಮಾರಿ ಅಲ್ಲಗಳೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


