ಹಣದುಬ್ಬರ ಕುರಿತ ಚರ್ಚೆಗೆ ರಾಜ್ಯಸಭೆ ಉಪ ಸಭಾಪತಿ ನಿರಾಕರಣೆ: ಪ್ರತಿಪಕ್ಷ ಸದಸ್ಯರ ಸಭಾತ್ಯಾಗ
ಹಣದುಬ್ಬರ, ಬೆಲೆ ಏರಿಕೆ ಮತ್ತು ರೈತರಿಗೆ ಸಂಬಂಧಿಸಿದ ವಿಚಾರಗಳಿಂದಾಗಿ ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳ ಸದಸ್ಯರು ಗುರುವಾರ ರಾಜ್ಯಸಭೆಯಿಂದ ಸಭಾತ್ಯಾಗ ನಡೆಸಿದವು.

ನವದೆಹಲಿ: ಹಣದುಬ್ಬರ, ಬೆಲೆ ಏರಿಕೆ ಮತ್ತು ರೈತರಿಗೆ ಸಂಬಂಧಿಸಿದ ವಿಚಾರಗಳಿಂದಾಗಿ ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷ ಸದಸ್ಯರು ಗುರುವಾರ ರಾಜ್ಯಸಭೆಯಿಂದ ಸಭಾತ್ಯಾಗ ನಡೆಸಿದರು.
ಹಣದುಬ್ಬರ ಕುರಿತ ಚರ್ಚೆಗೆ ಉಪ ಸಭಾಪತಿ ಹರಿವಂಶ್ ನಿರಾಕರಿಸಿದ ನಂತರ ಮೊದಲಿಗೆ ಕಾಂಗ್ರೆಸ್ ಸಭಾತ್ಯಾಗ ನಡೆಸಿತು. ತದನಂತರ ಎಡ ಪಕ್ಷ ಮತ್ತಿತರ ಕೆಲ ಸಣ್ಣ ಪಕ್ಷಗಳ ಮುಖಂಡರು ಸದನದಿಂದ ಹೊರಗೆ ನಡೆದರು. ರೈತರ ಸಮಸ್ಯೆಗಳನ್ನು ಎತ್ತಿ ಟಿಎಂಸಿ, ಟಿಆರ್ ಎಸ್ , ಡಿಎಂಕೆ ಮತ್ತಿತರ ಪಕ್ಷಗಳು ಸದಸ್ಯರು ಕೂಡಾ ಸಭಾತ್ಯಾಗ ನಡೆಸಿದರು.
ಹಣದುಬ್ಬರ, ಬೆಲೆ ಏರಿಕೆ ಮತ್ತಿತರ ವಿಚಾರಗಳ ಬಗ್ಗೆ ಚರ್ಚೆ ನಡೆಯಬೇಕೆಂದು ಪ್ರತಿಪಕ್ಷ ನಾಯಕ ಮಲ್ಲಿಕಾರ್ಜನ ಖರ್ಗೆ
ಬೇಡಿಕೆಯಿಟ್ಟರು. ಪ್ರಶ್ನೋತ್ತರ ಅವಧಿ ಇದುದ್ದರಿಂದ ಆ ಬೇಡಿಕೆಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಉಪ ಸಭಾಪತಿ ಹೇಳಿದರು.
ತದನಂತರ ಇತರ ಪಕ್ಷಗಳು ರೈತರ ಕುರಿತ ಸಮಸ್ಯೆಗಳು ಹಾಗೂ ಕನಿಷ್ಠ ಬೆಂಬಲ ಬೆಲೆ ವಿಚಾರ ಪ್ರಸ್ತಾಪಿಸಿ ಸದನದಿಂದ ನಿರ್ಗಮಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


