ವಾಯುಮಾಲಿನ್ಯದ ನಡುವೆಯೂ ಶಾಲೆಗಳ ಆರಂಭಿಸಿದ ದೆಹಲಿ ಸರ್ಕಾರದ ವಿರುದ್ಧ 'ಸುಪ್ರೀಂ' ಚಾಟಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಉಲ್ಬಣವಾಗಿರುವಂತೆಯೇ ಶಾಲೆಗಳನ್ನು ತೆರೆಯುವ ದೆಹಲಿ ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಉಲ್ಬಣವಾಗಿರುವಂತೆಯೇ ಶಾಲೆಗಳನ್ನು ತೆರೆಯುವ ದೆಹಲಿ ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ.
ನಗರದಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ನಡುವೆಯೂ ಶಾಲೆಗಳನ್ನು ತೆರೆಯುವ ದೆಹಲಿ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಗುರುವಾರ ತರಾಟೆಗೆ ತೆಗೆದುಕೊಂಡಿದೆ.
ವಾಯುಮಾಲಿನ್ಯದ ಹಿನ್ನಲೆಯಲ್ಲಿ ಸರ್ಕಾರವು ವಯಸ್ಕರಿಗೆ ವರ್ಕ್ ಫ್ರಂ ಹೋಮ್ ಜಾರಿ ಮಾಡಿರುವ ಈ ಹೊತ್ತಿನಲ್ಲಿ ಮಕ್ಕಳನ್ನು ಶಾಲೆಗೆ ಹೋಗಲು ಏಕೆ ಒತ್ತಾಯಿಸಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿಕಾರಿದೆ. ಅಂತೆಯೇ 'ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣ ಹೆಚ್ಚುತ್ತಿದ್ದರೂ ಏನೂ ಆಗುತ್ತಿಲ್ಲ ಎಂದು ನಮಗೆ ಅನಿಸುತ್ತಿದೆ. ರಾಜಧಾನಿಯ ವಾಯು ಗುಣಮಟ್ಟವು ತೀವ್ರ ಹದಗೆಟ್ಟಿತ್ತು ಎಂದು ಹೇಳಿದೆ.
ಇದನ್ನೂ ಓದಿ: ವಾಯು ಮಾಲಿನ್ಯ: ಡಿ. 7ರವರೆಗೆ ಕಟ್ಟಡ ನಿರ್ಮಾಣ ಕಾರ್ಯ, ಟ್ರಕ್ಗಳ ಓಡಾಟಕ್ಕೆ ನಿರ್ಬಂಧ ವಿಧಿಸಿದ ದೆಹಲಿ ಸರ್ಕಾರ
ಇನ್ನು ಭೂ ವಿಜ್ಞಾನ ಸಚಿವಾಲಯದ ವಾಯು ಗುಣಮಟ್ಟ ಮಾನಿಟರ್ 'SAFAR' ಪ್ರಕಾರ, 'ಗುರುವಾರ ದೆಹಲಿ ವಾಯು ಗುಣಮಟ್ಟವು ತೀವ್ರ ಹದಗೆಟ್ಟಿತ್ತು. AQI 8 ಗಂಟೆಗೆ 419ರಷ್ಟಿತ್ತು. ಅಂತೆಯೇ ದೆಹಲಿ ಕನಿಷ್ಠ ತಾಪಮಾನವು ಋತುವಿನ ಸರಾಸರಿಗಿಂತ ನಾಲ್ಕು ಪಟ್ಟು ಕಡಿಮೆ ಅಂದರೆ 13.4 ಡಿಗ್ರಿ ಸೆಲ್ಸಿಯಸ್ ನಷ್ಟಿದೆ. ಅಂತೆಯೇ ಉತ್ತಮ ಗಾಳಿಯ ವೇಗದಿಂದಾಗಿ ಗಾಳಿಯ ಗುಣಮಟ್ಟ ಶುಕ್ರವಾರದಿಂದ ಸುಧಾರಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


