ಕೇರಳ: ಪೊಲೀಸ್ ಲಾಕಪ್‌ನಿಂದ ತಪ್ಪಿಸಿಕೊಂಡು ಠಾಣೆಯ ಪಕ್ಕದಲ್ಲಿದ್ದ ನದಿಗೆ ಹಾರಿದ್ದ ಆರೋಪಿ ಜಲಸಮಾಧಿ!
ತೊಡುಪುಳ ಠಾಣೆಯಲ್ಲಿ ಪೊಲೀಸರ ವಶದಲ್ಲಿದ್ದ ಆರೋಪಿಯೊಬ್ಬ ಲಾಕ್‌ಅಪ್‌ನಿಂದ ತಪ್ಪಿಸಿಕೊಂಡು ಪಕ್ಕದ ನದಿಗೆ ಹಾರಿದ್ದ ಆದರೆ ದುರಾದೃಷ್ಟವಶಾತ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ತೊಡುಪುಳ(ಇಡುಕ್ಕಿ): ತೊಡುಪುಳ ಠಾಣೆಯಲ್ಲಿ ಪೊಲೀಸರ ವಶದಲ್ಲಿದ್ದ ಆರೋಪಿಯೊಬ್ಬ ಲಾಕ್‌ಅಪ್‌ನಿಂದ ತಪ್ಪಿಸಿಕೊಂಡು ಪಕ್ಕದ ನದಿಗೆ ಹಾರಿದ್ದ ಆದರೆ ದುರಾದೃಷ್ಟವಶಾತ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
35 ವರ್ಷದ ಆರೋಪಿ ಶಫಿ ಮೃತ ದುರ್ದೈವಿ ಎಂದು ಪೊಲೀಸರು ತಿಳಿಸಿದ್ದಾರೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಮುಂದಾದಾಗ ಪರಾರಿಯಾಗಿದ್ದಾನೆ.
ಲಾಕ್‌ಅಪ್ ಅನ್ನು ಸರಿಯಾಗಿ ಲಾಕ್ ಮಾಡಿರಲಿಲ್ಲ. ಹೀಗಾಗಿ ಆರೋಪಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ನದಿಗೆ ಹಾರಿದ್ದ ಶಫಿಯನ್ನು ಸ್ಥಳೀಯರೊಂದಿಗೆ ಸೇರಿ ಪೊಲೀಸರು ದಡದ ಮೂಲಕ ಅಟ್ಟಿಸಿಕೊಂಡು ಹೋಗಿದ್ದರು. ಈ ವೇಳೆ ಸುಮಾರು ಒಂದು ಕಿಲೋಮೀಟರ್ ಈಜಿದನು. ಅಷ್ಟರಲ್ಲಿ ಅಲ್ಲಿಗೆ ಅಗ್ನಿಶಾಮಕ ದಳವೂ ಬಂದಿತ್ತು. ನಾವೆಲ್ಲರೂ ಅವನನ್ನು ದಡಕ್ಕೆ ಬರುವಂತೆ ಮನವಿ ಮಾಡಿದ್ದೇವು. ಆದರೆ ಅವನು ನಿರಾಕರಿಸಿದನು. ಸ್ವಲ್ಪ ಸಮಯದ ನಂತ ನೀರಿನಲ್ಲಿ ಮುಳುಗಿದನು ಎಂದು ಪೊಲೀಸರು ಹೇಳಿದರು.
ಶಫಿ ವಿರುದ್ಧ ಸುಮಾರು 18 ಅಥವಾ 19 ಪ್ರಕರಣಗಳು ದಾಖಲಾಗಿದ್ದು, ಇಂದು ಬೆಳಗ್ಗೆ ಹಲ್ಲೆ ಪ್ರಕರಣದಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಠಾಣೆಯ ಪಕ್ಕದಲ್ಲಿ ತೊಡುಪುಳ ನದಿ ಹರಿಯುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


