ಈ ರಾಹುಲ್ ಗಾಂಧಿ ಅಂದರೆ ಯಾರು? ನನಗೆ ಆತನ ಪರಿಚಯವಿಲ್ಲ: ಅಸಾದುದ್ದೀನ್ ಓವೈಸಿ
ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಶುಕ್ರವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಂಬರುವ ದಿನಗಳಲ್ಲಿ ಪಕ್ಷವು ಒಡೆದು ಹೋಗುತ್ತದೆ ಎಂದಿದ್ದಾರೆ.

ನವದೆಹಲಿ: ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಶುಕ್ರವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಂಬರುವ ದಿನಗಳಲ್ಲಿ ಪಕ್ಷವು ಒಡೆದು ಹೋಗುತ್ತದೆ ಎಂದಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನ್ನು ಹಲವಾರು ರಾಜ್ಯಗಳಲ್ಲಿ ಏಕಕಾಲದಲ್ಲಿ ವಿಸ್ತರಿಸುವ ಪ್ರಯತ್ನವನ್ನು ಉಲ್ಲೇಖಿಸಿದ ಓವೈಸಿ, ಅವರು ಇತರ ರಾಜ್ಯಗಳಲ್ಲಿ ಹೋರಾಟವನ್ನು ಮುಂದುವರಿಸಬೇಕು ಮತ್ತು ಕಾಂಗ್ರೆಸ್ ಎರಡು ಮೂರು ವರ್ಷದಲ್ಲಿ ಒಡೆದು ಚೂರಾಗುತ್ತದೆ ಎಂದರು.
ಓವೈಸಿಗೆ ರಾಹುಲ್ ಗಾಂಧಿ ನಾಯಕತ್ವದಲ್ಲಿ ನಂಬಿಕೆ ಇಲ್ಲವೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಹುಲ್ ಗಾಂಧಿ ಯಾರು? ನನಗೆ ಆತನ ಪರಿಚಯವಿಲ್ಲ. ಅವರು ಯಾರೆಂದು ನಿಮಗೆ ತಿಳಿದಿದ್ದರೆ ದಯವಿಟ್ಟು ನನಗೆ ತಿಳಿಸಿ ಎಂದು ಓವೈಸಿ ಹೇಳಿದರು.
ಓವೈಸಿಗೆ ಪ್ರಶ್ನೆಗೆ ಉತ್ತರಿಸಿದ ತ್ರಿವೇದಿ, ಎಐಎಂಐಎಂನಂತಹ ಪಕ್ಷಗಳು ಮತ್ತು ಓವೈಸಿಯಂತಹ ನಾಯಕರು ಕಾಂಗ್ರೆಸ್‌ನಿಂದ ಬೆಳೆದು ಬಂದಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


