ನೌಕಾಪಡೆ ದಿನ: ಶುಭಾಶಯ ಕೋರಿದ ಪ್ರಧಾನಿ ಮೋದಿ
ಭಾರತೀಯ ನೌಕಾಪಡೆ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೌಕಾಪಡೆಗೆ ಶುಭಾಶಯಗಳನ್ನು ಕೋರಿದ್ದಾರೆ.

ನವದೆಹಲಿ: ಭಾರತೀಯ ನೌಕಾಪಡೆ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೌಕಾಪಡೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ವಿಡಿಯೊ ಟ್ವೀಟ್ ಮಾಡಿರುವ ಅವರು, ‘ಭಾರತೀಯ ನೌಕಾಪಡೆಯ ಅನುಕರಣೀಯ ಕೊಡುಗೆಗಳ ಬಗ್ಗೆ ನಾವು ಹೆಮ್ಮೆಪಡುತ್ತೇವೆ. ನೈಸರ್ಗಿಕ ವಿಕೋಪಗಳಂತಹ ಬಿಕ್ಕಟ್ಟಿನ ಸಂದರ್ಭಗಳನ್ನು ಎದುರಿಸುವಲ್ಲಿ ನಮ್ಮ ನೌಕಾಪಡೆಯ ಸಿಬ್ಬಂದಿ ಯಾವಾಗಲೂ ಮುಂಚೂಣಿಯಲ್ಲಿದ್ದಾರೆ‘ ಎಂದು ಹೇಳಿದ್ದಾರೆ.
ಇದರಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರೂ ಕೂಡ ನೌಕಾಪಡೆಗೆ ನೌಕಾಪಡೆಯ ದಿನ ಕುರಿತು ಶುಭಾಶಯಗಳನ್ನು ಕೋರಿದ್ದಾರೆ.
ಭಾರತೀಯ ನೌಕಾಪಡೆಯ ಪಾತ್ರ ಮತ್ತು ಸಾಧನೆಗಳನ್ನು ಗುರುತಿಸಲು ಪ್ರತಿ ವರ್ಷ ಡಿಸೆಂಬರ್ 4 ರಂದು ಭಾರತದಲ್ಲಿ ನೌಕಾಪಡೆಯ ದಿನವನ್ನು ಆಚರಿಸಲಾಗುತ್ತದೆ.
1971 ರಲ್ಲಿ ಇಂಡೋ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಪಾಕಿಸ್ತಾನದ ವಿರುದ್ಧ ಆಪರೇಷನ್ ಟ್ರೈಡೆಂಟ್ ಅನ್ನು ಪ್ರಾರಂಭಿಸುವ ನೆನಪಿಗಾಗಿ ಈ ದಿನವನ್ನು ಆಯ್ಕೆ ಮಾಡಲಾಗಿದೆ.
ಪಾಕಿಸ್ತಾನದ ವಿರುದ್ಧ 1971ರಲ್ಲಿ ನಡೆದ ಯುದ್ಧದಲ್ಲಿ ಕರಾಚಿಯ ನೌಕಾನೆಲೆಯ ಮೇಲೆ ಭಾರತೀಯ ನೌಕಾಪಡೆಯ ಕ್ಷಿಪಣಿ ವಾಹಕ ನೌಕೆಗಳು ದಾಳಿ ಮಾಡಿದ್ದವು. ಇದರಿಂದ ಪಾಕಿಸ್ತಾನವು ಸೋಲು ಕಂಡಿತ್ತು. ಇದರ ನೆನಪಿಗಾಗಿ ಪ್ರತಿ ವರ್ಷ ಡಿ.4ರಂದು ‘ನೌಕಾಪಡೆ ದಿನಾಚರಣೆ’ ಹಮ್ಮಿಕೊಳ್ಳಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


