ಮ್ಯಾನ್ಮಾರ್: ಆಂಗ್ ಸಾನ್ ಸೂಕಿಗೆ ಜೈಲು ಶಿಕ್ಷೆ; ನ್ಯಾಯಾಲಯದ ತೀರ್ಪಿನಿಂದ ಆಘಾತವಾಗಿದೆ ಎಂದ ಭಾರತ
ಮ್ಯಾನ್ಮಾರ್ ನಾಗರಿಕ ಹೋರಾಟಗಾರ್ತಿ ಆಂಗ್ ಸಾನ್ ಸೂಕಿ ವಿಧಿಸಲಾಗಿರುವ ಜೈಲು ಶಿಕ್ಷೆ ಕುರಿತು ಭಾರತ ಆಘಾತ ವ್ಯಕ್ತಪಡಿಸಿದೆ.

ನವದೆಹಲಿ: ಮ್ಯಾನ್ಮಾರ್ ನಾಗರಿಕ ಹೋರಾಟಗಾರ್ತಿ ಆಂಗ್ ಸಾನ್ ಸೂಕಿ ವಿಧಿಸಲಾಗಿರುವ ಜೈಲು ಶಿಕ್ಷೆ ಕುರಿತು ಭಾರತ ಆಘಾತ ವ್ಯಕ್ತಪಡಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು, 'ಮ್ಯಾನ್ಮಾರ್ ನಾಗರಿಕ ಹೋರಾಟಗಾರ್ತಿ ಆಂಗ್ ಸಾನ್ ಸೂಕಿ ಹಾಗೂ ಇನ್ನೂ ಕೆಲವರ ವಿರುದ್ಧ ಮ್ಯಾನ್ಮಾರ್ ನ್ಯಾಯಾಲಯ ನೀಡಿರುವ ತೀರ್ಪಿನಿಂದ ಆಘಾತವಾಗಿ ಎಂದು ಹೇಳಿದ್ದಾರೆ.
ಮ್ಯಾನ್ಮಾರ್‌ನಲ್ಲಿ ಸೂಕಿ ಮತ್ತು ಇತರರ ವಿರುದ್ಧ ನೀಡಲಾಗಿರುವ ತೀರ್ಪುಗಳಿಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, 'ಇತ್ತೀಚಿನ ತೀರ್ಪುಗಳಿಂದ ನಾವು ಆಘಾತಗೊಂಡಿದ್ದೇವೆ. ನೆರೆಯ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತವು ಮ್ಯಾನ್ಮಾರ್‌ನಲ್ಲಿ ಪ್ರಜಾಸತ್ತಾತ್ಮಕ ಪರಿವರ್ತನೆಯನ್ನು ನಿರಂತರವಾಗಿ ಬೆಂಬಲಿಸುತ್ತಿದೆ. ಕಾನೂನು ಮತ್ತು ಪ್ರಜಾಪ್ರಭುತ್ವದ ಪ್ರಕ್ರಿಯೆಗಳನ್ನು ಎತ್ತಿ ಹಿಡಿಯಬೇಕು ಎಂಬುದರಲ್ಲಿ ನಂಬಿಕೆ ಇಟ್ಟಿದ್ದೇವೆ. ಆ ಪ್ರಕ್ರಿಯೆಯನ್ನು ದುರ್ಬಲಗೊಳಿಸುವ ಯಾವುದೇ ಘಟನೆಗಳು ನಡೆಯುವುದು ಕಳವಳದ ಸಂಗತಿ. ಅಂತೆಯೇ ಆ ದೇಶದ ಭವಿಷ್ಯವನ್ನು ಗಮನದಲ್ಲಿರಿಸಿ, ಮಾತುಕತೆ ನಡೆಸಲು ಸಾಧ್ಯವಿರುವ ಎಲ್ಲ ಪ್ರಯತ್ನವನ್ನು ಮಾಡಲಾಗುವುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಬಂಧನವೇಕೆ?
ಮ್ಯಾನ್ಮಾರ್ ಆಡಳಿತವನ್ನು ಅಲ್ಲಿನ ಸೇನೆಯು ಫೆಬ್ರವರಿಯಲ್ಲಿ ಹಿಡಿತಕ್ಕೆ ಪಡೆದಿತ್ತು. ಅದಾದ ಬಳಿಕ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ಈ ವೇಳೆ ನಡೆದ ಹಿಂಸಾಚಾರದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಮಂದಿ ಮೃತಪಟ್ಟಿದ್ದರು. ನ್ಯಾಷನಲ್ ಲೀಗ್ ಫಾರ್ ಡೆಮಾಕ್ರಸಿ (ಎನ್‌ಎಲ್‌ಡಿ) ನಾಯಕಿ ಸೂಕಿ ಸೇರಿದಂತೆ ಹಲವು ಪ್ರಮುಖ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಲಾಗಿತ್ತು. ಕೋವಿಡ್ ನಿಯಮ ಉಲ್ಲಂಘನೆ ಮತ್ತು ಶಾಂತಿ ಭಂಗ ಉಂಟುಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ಸೂಕಿ ಅವರಿಗೆ ನಾಲ್ಕು ವರ್ಷ ಶಿಕ್ಷೆ ಪ್ರಕಟಿಸಲಾಗಿತ್ತು. ಬಳಿಕ ಶಿಕ್ಷೆಯ ಪ್ರಮಾಣವನ್ನು ಎರಡು ವರ್ಷಕ್ಕೆ ಇಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


