ದೇಶ

ಕೋವಿಡ್-19: ದೇಶದಲ್ಲಿ ಇಂದು 8,439 ಹೊಸ ಸೋಂಕು ಪ್ರಕರಣ, 195 ಸಾವು ವರದಿ

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 8,439 ಹೊಸ ಸೋಂಕು ಪ್ರಕರಣಗಳು, 195 ಸಾವು ವರದಿಯಾಗಿದೆ.

ಕೋವಿಡ್-19: ದೇಶದಲ್ಲಿ ಇಂದು 8,439 ಹೊಸ ಸೋಂಕು ಪ್ರಕರಣ, 195 ಸಾವು ವರದಿ
ಸಾಂದರ್ಭಿಕ ಚಿತ್ರ
Published On :

ನವದಹಲಿ: ದೇಶಾದ್ಯಂತ ಓಮಿಕ್ರಾನ್ ರೂಪಾಂತರಿ ಭೀತಿ ಮುಂದುವರೆದಿರುವಂತೆಯೇ ಇತ್ತ ದೇಶದಲ್ಲಿ ಕೋವಿಡ್-19 ಸೋಂಕಿನ ಏರಿಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 8,439 ಹೊಸ ಸೋಂಕು ಪ್ರಕರಣಗಳು, 195 ಸಾವು ವರದಿಯಾಗಿದೆ.

ಈ ಕುರಿತು ಕೇಂದ್ಲ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 8,439 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ. ಅಂತೆಯೇ 195 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್ ಗೆ ಬಲಿಯಾದವರ ಸಂಖ್ಯೆ  4,73,952ಕ್ಕೆ ಏರಿಕೆಯಾಗಿದೆ.

ಇನ್ನು ಇದೇ ಸಂದರ್ಭದಲ್ಲಿ ದೇಶಾದ್ಯಂತ 9,525 ಮಂದಿ ಸೋಂಕಿತರು ಗುಣಮುಖರಾಗಿದ್ದು ಆ ಮೂಲಕ ಗುಣಮುಖರ ಸಂಖ್ಯೆ 3,40,89,137ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 93,733 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಅಂತೆಯೇ ದೇಶದಲ್ಲಿನ ಒಟ್ಟಾರೆ ಕೋವಿಡ್ ಲಸಿಕೆಗಳ ಪ್ರಮಾಣ   129.5 ಕೋಟಿ ಡೋಸ್ ಗೆ ಏರಿಕೆಯಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.