ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಲೆಫ್ಟಿನೆಂಟ್ ಜನರಲ್ ರಾವತ್ ಹಾಗೂ ಅವರ ಪತ್ನಿ ಅಂತ್ಯಕ್ರಿಯೆ ಶುಕ್ರವಾರ
ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ನಡೆದ ಹೆಲಿಕಾಫ್ಟರ್ ಪತನದಲ್ಲಿ ಮೃತಪಟ್ಟ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಅವರ ಅಂತ್ಯಕ್ರಿಯೆ ಡಿ.10 ರಂದು ದೆಹಲಿಯ ಕಂಟೋನ್ಮೇಂಟ್ ನಲ್ಲಿ ನಡೆಯಲಿದೆ.

ನವದೆಹಲಿ: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ನಡೆದ ಹೆಲಿಕಾಫ್ಟರ್ ಪತನದಲ್ಲಿ ಮೃತಪಟ್ಟ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಅವರ ಅಂತ್ಯಕ್ರಿಯೆ ಡಿ.10 ರಂದು ದೆಹಲಿಯ ಕಂಟೋನ್ಮೇಂಟ್ ನಲ್ಲಿ ನಡೆಯಲಿದೆ.
ಗುರುವಾರ ಸಂಜೆ ವೇಳೆಗೆ ಮೃತರ ಪಾರ್ಥಿವ ಶರೀರ ರಾಷ್ಟ್ರ ರಾಜಧಾನಿ ತಲುಪಲಿದ್ದು, ತಮಿಳುನಾಡಿಗೆ ಏರ್ ಮಾರ್ಷಲ್ ವಿ. ಆರ್ ಚೌಧರಿ ಈಗಾಗಲೇ ತಲುಪಿದ್ದಾರೆ.
ಶುಕ್ರವಾರದಂದು ರಾವತ್ ಅವರ ಪಾರ್ಥಿವ ಶರೀರವನ್ನು ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಅವಕಾಶ ನೀಡಲಾಗುವುದು ಈ ಬಳಿಕ ಕಾಮರಾಜ್ ಮಾರ್ಗ್ ನಿಂದ ಬ್ರಾರ್ ಸ್ಕ್ವೇರ್ ಚಿತಾಗಾರದವರೆಗೂ ಮೆರವಣಿಗೆ ನಡೆಸಲಾಗುತ್ತದೆ. ಬಳಿಕ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಜನರಲ್ ರಾವತ್ ಹಾಗೂ ಅವರ ಪತ್ನಿ ಇನ್ನೂ 11 ಮಂದಿ ಸೇನಾ ಅಧಿಕಾರಿಗಳು ರಕ್ಷಣಾ ಕಾಲೇಜಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಯಿಂದ ತಮಿಳುನಾಡಿಗೆ ಸೇನಾ ಹೆಲಿಕಾಫ್ಟರ್ ನಲ್ಲಿ ತೆರಳುತ್ತಿದ್ದಾಗ ಕೂನೂರು ಬಳಿ ಹೆಲಿಕಾಫ್ಟರ್ ಪತನಗೊಂಡು ಈ ದುರ್ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


