ಹೆಲಿಕಾಪ್ಟರ್ ದುರಂತ: 'ಊಹಾಪೋಹ ನಿಲ್ಲಿಸಿ.. ಮೃತರ ಘನತೆ ಕಾಪಾಡಿ'- ಐಎಎಫ್
ಭಾರತದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ಸ್ (ಸಿಡಿಎಸ್) ಬಿಪಿನ್ ರಾವತ್ ಅವರ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ಊಹಾಪೋಹಗಳನ್ನು ನಿಲ್ಲಿಸಿ ಎಂದು ಭಾರತೀಯ ವಾಯುಸೇನೆ ಸಾರ್ವಜನಿಕರಿಗೆ ಮನವಿ ಮಾಡಿದೆ.

ನವದೆಹಲಿ: ಭಾರತದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ಸ್ (ಸಿಡಿಎಸ್) ಬಿಪಿನ್ ರಾವತ್ ಅವರ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ಊಹಾಪೋಹಗಳನ್ನು ನಿಲ್ಲಿಸಿ ಎಂದು ಭಾರತೀಯ ವಾಯುಸೇನೆ ಸಾರ್ವಜನಿಕರಿಗೆ ಮನವಿ ಮಾಡಿದೆ.
ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದ ಕುರಿತ ಊಹಾಪೋಹಗಳನ್ನು ನಿಲ್ಲಿಸಬೇಕು. ಆ ಮೂಲಕ ಮೃತರ ಘನತೆಯನ್ನು ಕಾಪಾಡುವಂತೆ ಭಾರತೀಯ ವಾಯುಸೇನೆ ಮನವಿ ಮಾಡಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಭಾರತೀಯ ವಾಯುಸೇನೆ, 'ಡಿಸೆಂಬರ್ 8ರಂದು ಸಂಭವಿಸಿದ ಹೆಲಿಕಾಪ್ಟರ್ ದುರಂತದ ಕಾರಣದ ತನಿಖೆಗಾಗಿ ಭಾರತೀಯ ವಾಯುಪಡೆಯು ಮೂರೂ ಸೇನೆಗಳ ಸದಸ್ಯರು ಇರುವ ಸಮಿತಿ ರಚಿಸಿದೆ. ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುತ್ತದೆ. ದುರಂತಕ್ಕೆ ಕಾರಣವಾದ ಸತ್ಯವನ್ನೂ ಹೊರತರಲಾಗುತ್ತದೆ. ಅಲ್ಲಿಯವರೆಗೆ, ಮಡಿದವರ ಘನತೆಯನ್ನು ಕಾಪಾಡಲು, ಮಾಹಿತಿ ಇಲ್ಲದ ಊಹಾಪೋಹಗಳನ್ನು ತಡೆಯಬೇಕು,’ ಎಂದು ವಾಯುಪಡೆಯ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಶುಕ್ರವಾರ ಟ್ವೀಟ್ ಮಾಡಲಾಗಿದೆ.
ತಮಿಳುನಾಡಿನ ಕೂನೂರು ಸಮೀಪ ಬುಧವಾರ ಸೇನಾ ಹೆಲಿಕಾಪ್ಟರ್ ಪತನಗೊಂಡ ಪ್ರಕರಣದ ತನಿಖೆಯನ್ನು ಮೂರೂ ಸೇನೆಗಳ ಸದಸ್ಯರು ಇರುವ ಸಮಿತಿ ನಡೆಸಲಿದೆ. ಏರ್ ಮಾರ್ಷಲ್ ಮಾನವೇಂದ್ರ ಸಿಂಗ್ ಅವರು ತನಿಖೆಯ ನೇತೃತ್ವ ವಹಿಸಲಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ನೀಡಿದ ಹೇಳಿಕೆಯಲ್ಲಿ ಪ್ರಕಟಿಸಿದ್ದಾರೆ.
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ಮುಂದಿನ ಸಿಡಿಎಸ್ ಆಯ್ಕೆ ಪ್ರಕ್ರಿಯೆ ಶುರು: ಜನರಲ್ ಎಂ.ಎಂ. ನರವಣೆ ಹೆಸರು ಮುಂಚೂಣಿಯಲ್ಲಿ
ಅಂದು ನಡೆದ ದುರಂತದಲ್ಲಿ ಸೇನಾ ಪಡೆಗಳ ಮೊದಲ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ಸೇರಿದಂತೆ 13 ಮಂದಿ ಮೃತಪಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


