ಬಂಡಿಪೋರಾದಲ್ಲಿ ಉಗ್ರರ ದಾಳಿ: ಇಬ್ಬರು ಪೊಲೀಸರು ಹುತಾತ್ಮ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರ ಹಾವಳಿ ಹೆಚ್ಚಾಗಿದ್ದು, ಇಂದು ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರ ಹಾವಳಿ ಹೆಚ್ಚಾಗಿದ್ದು, ಇಂದು ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ.
ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುಲ್ಶಾನ್ ಚೌಕ್ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಮೊಹಮ್ಮದ್ ಸುಲ್ತಾನ್ ಮತ್ತು ಫಯಾಜ್ ಅಹ್ಮದ್ ಎಂಬ ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನೂ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾಶ್ಮೀರ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ (ಐಜಿ) ವಿಜಯ್ ಕುಮಾರ್ ಅವರು, 'ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುಲ್ಶನ್ ಚೌಕ್ನಲ್ಲಿ ಶುಕ್ರವಾರ ಮಧ್ಯಾಹ್ನ ಅಪರಿಚಿತ ಉಗ್ರರು ಪೊಲೀಸ್ ಪಡೆಯ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ದಾಳಿಯಲ್ಲಿ ಇಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದರು.ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿತ್ತಾದರೂ ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.
ಅಂತೆಯೇ ಘಟನಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


