ದೇಶ

ರಿಜ್ವಿ ಬಳಿಕ ಇಸ್ಲಾಮ್ ತೊರೆದು ಹಿಂದೂ ಧರ್ಮ ಸ್ವೀಕರಿಸಲು ಮುಂದಾದ ಖ್ಯಾತ ನಿರ್ದೇಶಕ ಅಲಿ ಅಕ್ಬರ್; ಕಾರಣ ಹೀಗಿದೆ..

ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ಅವರು ಇತ್ತೀಚೆಗೆ ಇಸ್ಲಾಮ್ ತೊರೆದು ಸನಾತನ ಧರ್ಮಾನುಯಾಗಿ ಪರ್ವರ್ತನೆಗೊಂಡಿದ್ದರು. ಈಗ ಅದೇ ಹಾದಿಯಲ್ಲಿದ್ದಾರೆ ಖ್ಯಾತ ನಿರ್ದೇಶಕ ಅಲಿ ಅಕ್ಬರ್.

ರಿಜ್ವಿ ಬಳಿಕ ಇಸ್ಲಾಮ್ ತೊರೆದು ಹಿಂದೂ ಧರ್ಮ ಸ್ವೀಕರಿಸಲು ಮುಂದಾದ ಖ್ಯಾತ ನಿರ್ದೇಶಕ ಅಲಿ ಅಕ್ಬರ್; ಕಾರಣ ಹೀಗಿದೆ..
ನಿರ್ದೇಶಕ ಅಲಿ ಅಕ್ಬರ್
Published On :

ತಿರುವನಂತಪುರಂ: ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ಅವರು ಇತ್ತೀಚೆಗೆ ಇಸ್ಲಾಮ್ ತೊರೆದು ಸನಾತನ ಧರ್ಮಾನುಯಾಗಿ ಪರ್ವರ್ತನೆಗೊಂಡಿದ್ದರು. ಈಗ ಅದೇ ಹಾದಿಯಲ್ಲಿದ್ದಾರೆ ಖ್ಯಾತ ನಿರ್ದೇಶಕ ಅಲಿ ಅಕ್ಬರ್.

ಅಲಿ ಅಕ್ಬರ್ ಅವರ ಈ ನಿರ್ಧಾರಕ್ಕೆ ಕಾರಣ ಸಿಡಿಎಸ್ ಬಿಪಿನ್ ರಾವತ್ ಅವರ ದುರ್ಮರಣಕ್ಕೆ ಕೆಲವು ಮುಸ್ಲಿಮರು ಸಂತಸ, ನಗುವಿನ ಎಮೋಜಿ ಹಾಕಿ ಸಂಭ್ರಮಿಸಿರುವುದಾಗಿದೆ. 

ಸಿಡಿಎಸ್ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸಿದ್ದ ದೇಶವಿರೋಧಿ ಮುಸ್ಲಿಮರ ನಡೆಯನ್ನು ಸಮುದಾಯದ ಯಾವುದೇ ಓರ್ವ ನಾಯಕನೂ ಖಂಡಿಸಿಲ್ಲ. ಆದ್ದರಿಂದ ಇಸ್ಲಾಮ್ ಧರ್ಮದಲ್ಲಿ ನನಗೆ ನಂಬಿಕೆ ಹೋಗಿದೆ ಎಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ವಿಡಿಯೋ ಮೂಲಕ ತಿಳಿಸಿದ್ದಾರೆ.

ಅಲಿ ಅವರಿಗೆ ಹಲವಾರು ಮುಸ್ಲಿಮರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಇತ್ತೀಚೀನ ಮಾಹಿತಿಯ ಪ್ರಕಾರ ಆ ವಿಡಿಯೋ ಸಾಮಾಜಿಕ ಜಾಲತಾಣದಿಂದ ಕಾಣೆಯಾಗಿದೆ ಆದರೆ ವಾಟ್ಸ್ ಆಪ್ ಗಳಲ್ಲಿ ವೈರಲ್ ಆಗತೊಡಗಿದೆ. 

ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ನಿಧನವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಲಿ ಅಕ್ಬರ್ ವಿಡಿಯೋದಲ್ಲಿ ಆಗ್ರಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.