ದೇಶ

ಟಿಕ್ರಿ ಪ್ರತಿಭಟನಾ ಸ್ಥಳದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ: ಇಬ್ಬರು ರೈತರು ದುರ್ಮರಣ

ದೆಹಲಿಯ ಟಿಕ್ರಿ ಗಡಿ ಬಳಿಯ ಪ್ರತಿಭಟನಾ ಸ್ಥಳದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಟ್ರಕ್ ವೊಂದು ಟ್ರ್ಯಾಕ್ಟರ್ ಟ್ರೈಲರ್ ಡಿಕ್ಕಿ ಹೊಡೆದ ಪರಿಣಾಮ ಪಂಜಾಬಿನ ಇಬ್ಬರು ರೈತರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.

ಟಿಕ್ರಿ ಪ್ರತಿಭಟನಾ ಸ್ಥಳದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ: ಇಬ್ಬರು ರೈತರು ದುರ್ಮರಣ
ಅಪಘಾತದ ಚಿತ್ರ
Published On :

ಹಿಸಾರ್:  ದೆಹಲಿಯ ಟಿಕ್ರಿ ಗಡಿ ಬಳಿಯ ಪ್ರತಿಭಟನಾ ಸ್ಥಳದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಟ್ರಕ್ ವೊಂದು ಟ್ರ್ಯಾಕ್ಟರ್ ಟ್ರೈಲರ್ ಡಿಕ್ಕಿ ಹೊಡೆದ ಪರಿಣಾಮ ಪಂಜಾಬಿನ ಇಬ್ಬರು ರೈತರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಹಿಸಾರ್ ನ ದಾಂದೂರ್ ಗ್ರಾಮದಲ್ಲಿ ಸಂಭವಿಸಿದ ಅಪಘಾತದಲ್ಲಿ ಓರ್ವ ರೈತ ತೀವ್ರವಾಗಿ ಗಾಯಗೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.

ಈ ರೈತರು ಪಂಜಾಬಿನ ಮುಕ್ತಾಸರ್ ಜಿಲ್ಲೆಯವರಾಗಿದ್ದು, ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ವರ್ಷವಿಡೀ ಪ್ರತಿಭಟನೆ ನಡೆಸಿ, ಕೊನೆಗೆ ವಿವಾದಾತ್ಮಾಕ ಕಾನೂನು ರದ್ದಾಗಿ ಮನೆಗೆ ಸಂತೋಷದಿಂದ ಹಿಂತಿರುಗುತ್ತಿದ್ದಾಗ  ಅಪಘಾತ ಸಂಭವಿಸಿದೆ. 

ಅಪಘಾತ ಸಂಭವಿಸಿದಾಗ ಟ್ರ್ಯಾಕ್ಟರ್ ಟ್ರೈಲರ್ ನಲ್ಲಿ ಐವರು ರೈತರು ಇದಿದ್ದಾಗಿ ಹಿಸಾರ್ ಪೊಲೀಸ್ ಇನ್ಸ್ ಪೆಕ್ಟರ್ ಕಪ್ತಾನ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಐವರು ರೈತರ ಪೈಕಿ ಓರ್ವ ರೈತ ಸ್ಥಳದಲ್ಲಿಯೇ ಮೃತಪಟ್ಟರೆ, ಮತ್ತೋರ್ವ ರೈತ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟಿರುವುದಾಗಿ ಇನ್ಸ್ ಪೆಕ್ಟರ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.