ಗುಜರಾತ್: ಬಿಜೆಪಿ ಶಾಸಕಿ 44 ವರ್ಷದ ಆಶಾ ಪಟೇಲ್ ಡೆಂಗ್ಯೂಗೆ ಬಲಿ
ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದ ಗುಜರಾತ್‌ನ ಬಿಜೆಪಿ ಪಕ್ಷದ ಶಾಸಕಿ ಆಶಾ ಪಟೇಲ್ ಇಂದು ನಿಧನರಾಗಿದ್ದಾರೆ.

ಅಹಮದಾಬಾದ್: ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದ ಗುಜರಾತ್‌ನ ಬಿಜೆಪಿ ಪಕ್ಷದ ಶಾಸಕಿ ಆಶಾ ಪಟೇಲ್ ಇಂದು ನಿಧನರಾಗಿದ್ದಾರೆ.
ಮೆಹ್ಸಾನಾ ಜಿಲ್ಲೆಯ ಉಂಜಾ ವಿಧಾನಸಭಾ ಕ್ಷೇತ್ರದ 44 ವರ್ಷದ ಶಾಸಕಿ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಕಳೆದ ಶುಕ್ರವಾರ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಾಜಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ 'ಉಂಜಾ ಪ್ರದೇಶದ ಶಾಸಕಿ ಆಶಾ ಪಟೇಲ್ ಅವರು ನಮ್ಮೊಂದಿಗಿಲ್ಲ. ಅವರನ್ನು ಡೆಂಗ್ಯೂ ಚಿಕಿತ್ಸೆಗಾಗಿ ಅಹಮದಾಬಾದ್‌ನ ಝೈಡಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಪ್ರಕರಣದ ಗಂಭೀರತೆ ಎಷ್ಟಿತ್ತೆಂದರೆ ವೈದ್ಯರ ತಂಡವು ಎಷ್ಟೇ ಪ್ರಯತ್ನಿಸಿದರೂ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.
ಆಶಾ ಪಟೇಲ್ ನಿಧನಕ್ಕೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ರಾಜ್ಯಪಾಲ ಆಚಾರ್ಯ ದೇವವ್ರತ್ ಸಂತಾಪ ಸೂಚಿಸಿದ್ದಾರೆ. ಆಶಾ ಪಟೇಲ್ ಪಾಟಿದಾರ್ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ಅವರು ಮೊದಲು 2017ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಉಂಜಾದಿಂದ ಶಾಸಕರಾಗಿ ಆಯ್ಕೆಯಾದರು. ಆದರೆ ಫೆಬ್ರವರಿ 2019ರಲ್ಲಿ ಆಡಳಿತಾರೂಢ ಬಿಜೆಪಿಗೆ ಸೇರಿದ್ದು ನಂತರ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


