ಯುವ ಸಮಾವೇಶಕ್ಕೆ ಅನುಮತಿ ರದ್ದು: ಗೃಹ ಬಂಧನದಲ್ಲಿ ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ ಅವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯ (ಪಿಡಿಪಿ) ಯುವ ಸಮಾವೇಶಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದು, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.

ಶ್ರೀನಗರ: ಮೆಹಬೂಬಾ ಮುಫ್ತಿ ಅವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯ (ಪಿಡಿಪಿ) ಯುವ ಸಮಾವೇಶಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದು, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.
ಶ್ರೀನಗರದ ಹಿರಿಯ ಪೊಲೀಸ್ ಅಧೀಕ್ಷಕರ ಕಚೇರಿಯಿಂದ ಸ್ವೀಕರಿಸಲಾದ ಕೋವಿಡ್ ಮಾರ್ಗಸೂಚಿಗಳನ್ನು ಒಳಗೊಂಡಂತಿರುವ ವರದಿಯ ಆಧಾರದ ಮೇಲೆ ಪಿಡಿಪಿ ವತಿಯಿಂದ ಗುಪ್ಕಾರ್‌ನಲ್ಲಿ ನಡೆಯಲಿರುವ ಯುವ ಸಮಾವೇಶಕ್ಕೆ ಅನುಮತಿ ನೀಡದಂತೆ ಆದೇಶ ನೀಡಲಾಗಿದೆ ಎಂದು ದಕ್ಷಿಣ ಶ್ರೀನಗರದ ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ ಹೇಳಿದ್ದಾರೆ.
ಸ್ಟೇಷನ್ ಹೌಸ್ ಅಧಿಕಾರಿಯಾದ ರಾಮ್ ಮುನ್ಷಿ ಬಾಗ್ ಅವರಿಗೆ ಸರ್ಕಾರದ ಅನುಮತಿಯಿಲ್ಲದೆ ಗುಪ್ಕಾರ್‌ನಲ್ಲಿ ಅಂತಹ ಯಾವುದೇ ಕಾರ್ಯಕ್ರಮ ನಡೆಯದಂತೆ ನೋಡಿಕೊಳ್ಳಲು ಈ ಮೂಲಕ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಯುವ ಸಮಾವೇಶ ಹಿನ್ನೆಲೆಯಲ್ಲಿ ಮೆಹಬೂಬಾ ಮುಫ್ತಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದ್ದು, ಮೆಹಬೂಬಾ ಮುಫ್ತಿ ಸಮಾವೇಶಕ್ಕೆ ಹೊರಡಬಹುದಾದ ಎಲ್ಲಾ ರಸ್ತೆಗಳನ್ನು ಪೊಲೀಸರು ಸೀಲ್ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


