ಶ್ರೀನಗರದಲ್ಲಿ ಎನ್ ಕೌಂಟರ್ ಗೆ ಇಬ್ಬರು ಉಗ್ರರ ಬಲಿ
ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ಹೊರವಲಯದಲ್ಲಿ ಸೋಮವಾರ ನಡೆದ ಭದ್ರತಾ ಪಡೆಗಳ ಜೊತೆಗೆ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಉಗ್ರರ ಹತ್ಯೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ಹೊರವಲಯದಲ್ಲಿ ಸೋಮವಾರ ನಡೆದ ಭದ್ರತಾ ಪಡೆಗಳ ಜೊತೆಗೆ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಉಗ್ರರ ಹತ್ಯೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಂಗ್ರೀತ್ ಪ್ರದೇಶದಲ್ಲಿ ಎನ್ ಕೌಂಟರ್ ನಡೆದಿರುವುದಾಗಿ ಅವರು ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಶ್ಮೀರ ವಲಯ ಪೊಲೀಸರು, ಇಬ್ಬರು ಅಪರಿಚಿತ ಉಗ್ರರ ಹತ್ಯೆಯಾಗಿದೆ. ಶೋಧ ಕಾರ್ಯ ಮುಂದುವರೆದಿರುವುದಾಗಿ ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಜೈಶ್ ಇ ಮೊಹಮ್ಮದ್ ನಡೆಸಿದ ದಾಳಿಗೆ ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾದ ಮರುದಿನವೇ ಈ ಕಾರ್ಯಾಚರಣೆ ನಡೆದಿದೆ.
ಕಾರ್ಯಾಚರಣೆ ವೇಳೆ ಸಿಕ್ಕಿಬಿದ್ದ ಉಗ್ರರಿಗೆ ಶರಣಾಗಲು ಅವಕಾಶ ನೀಡಲಾಯಿತು. ಆದರೆ, ಅವರು ನಿರಾಕರಿಸಿರುವುದರ ಜೊತೆಗೆ ಮನಬಂದಂತೆ ಗುಂಡು ಹಾರಿಸಿದರು. ಹಾಗಾಗಿ ನಾವು ಪ್ರತಿ ದಾಳಿ ನಡೆಸಿದೆವು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


