ಡಿ.20ರಿಂದ 'ಹೈ-ರಿಸ್ಕ್' ದೇಶಗಳಿಂದ ಬರುವವರಿಗೆ ಆರ್ ಟಿಪಿಸಿಆರ್ ಪರೀಕ್ಷೆ ಕಡ್ಡಾಯ: ಕೇಂದ್ರ ಸರ್ಕಾರ
ಡಿಸೆಂಬರ್ 20ರಿಂದ 'ಹೈ-ರಿಸ್ಕ್' ದೇಶಗಳಿಂದ ಬರುವವರಿಗೆ ಆರ್ ಟಿಪಿಸಿಆರ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ನವದೆಹಲಿ: ಡಿಸೆಂಬರ್ 20ರಿಂದ 'ಹೈ-ರಿಸ್ಕ್' ದೇಶಗಳಿಂದ ಬರುವವರಿಗೆ ಆರ್ ಟಿಪಿಸಿಆರ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಓಮಿಕ್ರಾನ್ ಸೋಂಕು ಮತ್ತು ಕೊರೊನಾ ಸೋಂಕಿನ ಹೆಚ್ಚಿನ ಸೋಂಕಿನಿಂದ ದೇಶಕ್ಕೆ ಬರುವ ವಿದೇಶಿ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಆರ್ ಟಿ ಪಿಸಿ ಆರ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಈ ತಿಂಗಳ 20 ರಿಂದ ದೇಶದ 6 ವಿಮಾನ ನಿಲ್ದಾಣದಲ್ಲಿ ಪರೀಕ್ಷೆಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ.
ಬೆಂಗಳೂರು, ಕೋಲ್ಕತ್ತಾ, ಮುಂಬೈ, ದೆಹಲಿ, ಮುಂಬೈ ,ಕೋಲ್ಕತ್ತಾ,ಚೆನ್ನೈ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳಿಗೆ ಬರುವ ಎಲ್ಲಾ ಪ್ರಯಾಣಿಕರಿಗೆ ಆರ್ ಟಿ ಪಿಸಿಆರ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ ಕೇಂದ್ರ ವಿಮಾನಯಾನ ಸಚಿವಾಲಯ ತಿಳಿಸಿದೆ.
ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಆರ್ ಟಿ ಪಿಸಿಆರ್ ಪರೀಕ್ಷೆಯ ಮುಂಚಿತವಾಗಿ ಪರೀಕ್ಷೆ ಮಾಡಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ದೇಶದ 6 ವಿಮಾನ ನಿಲ್ದಾಣಗಳಲ್ಲಿ ಪರೀಕ್ಷೆ ಮಾಡಲು ಸೂಚನೆ ನೀಡಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾಯಾನ ನಿರ್ದೇಶನಾಲಯ ತಿಳಿಸಿದೆ. ಏರ್ ಸುವಿಧಾ ಪೋರ್ಟಲ್ ನಲ್ಲಿ ವಿದೇಶಿ ಪ್ರವಾಸಿಗರು ಇದರ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ತಿಳಿಸಲಾಗಿದೆ.
ಅತಿ ಹೆಚ್ಚು ಸೋಂಕು ಇರುವ ದೇಶಗಳಲ್ಲಿ ದೇಶಕ್ಕೆ ಬರುವ ಪ್ರಯಾಣಿಕರು 14 ದಿನಗಳ ಕಾಲ ಕ್ವಾಂರಟೈನ್ ನಲ್ಲಿ ಇರಬೇಕು ಎಂದು ಸೂಚಿಸಲಾಗಿದೆ. ಜಗತ್ತಿನ ಹಲವು ದೇಶಗಳು ಭಾರತದ ಕೋವಿಡ್ ಲಸಿಕಾ ಪ್ರಮಾಣಪತ್ರವನ್ನು ಸ್ವೀಕರಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


