ಎಲ್ಲರಿಗೂ ಮೂಲಭೂತ ಹಕ್ಕುಗಳಿವೆ; ಲೈಂಗಿಕ ಕಾರ್ಯಕರ್ತರಿಗೆ ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ ನೀಡಿ: ಸುಪ್ರೀಂ ಕೋರ್ಟ್
ದೇಶದ ಪ್ರತಿಯೊಬ್ಬ ನಾಗರಿಕನೂ ಮೂಲಭೂತ ಹಕ್ಕುಗಳನ್ನು ಪಡೆಯಲು ಅರ್ಹನಾಗಿದ್ದು, ಲೈಂಗಿಕ ಕಾರ್ಯಕರ್ತೆರಿಗೆ ಆಧಾರ್ ಕಾರ್ಡ್, ಪಡಿತರ ಮತ್ತು ಮತದಾರರ ಗುರುತಿನ ಚೀಟಿಯನ್ನು ನೀಡುವ ಪ್ರಕ್ರಿಯೆಯನ್ನು ಆದಷ್ಟು ಬೇಗ ನಡೆಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ, ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ನವದೆಹಲಿ: ದೇಶದ ಪ್ರತಿಯೊಬ್ಬ ನಾಗರಿಕನೂ ಮೂಲಭೂತ ಹಕ್ಕುಗಳನ್ನು ಪಡೆಯಲು ಅರ್ಹನಾಗಿದ್ದು, ಲೈಂಗಿಕ ಕಾರ್ಯಕರ್ತೆರಿಗೆ ಆಧಾರ್ ಕಾರ್ಡ್, ಪಡಿತರ ಮತ್ತು ಮತದಾರರ ಗುರುತಿನ ಚೀಟಿಯನ್ನು ನೀಡುವ ಪ್ರಕ್ರಿಯೆಯನ್ನು ಆದಷ್ಟು ಬೇಗ ನಡೆಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ, ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.
ಕೋವಿಡ್–19 ಸಾಂಕ್ರಾಮಿಕದಿಂದ ಸಂಕಷ್ಟಕ್ಕೆ ಸಿಲುಕಿರುವ ಲೈಂಗಿಕ ಕಾರ್ಯಕರ್ತೆಯರ ಸಮಸ್ಯೆಗಳ ಕುರಿತಾದ ಅರ್ಜಿಯ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ , ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರನ್ನು ಒಳಗೊಂಡ ಪೀಠವು ಈ ಆದೇಶ ನೀಡಿದೆ.
'ಲೈಂಗಿಕ ಕಾರ್ಯಕರ್ತರಿಗೆ ಪಡಿತರ ಚೀಟಿ ಮತ್ತು ಮತದಾರರ ಗುರುತಿನ ಚೀಟಿಯನ್ನು ನೀಡುವಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ದಶಕಗಳ ಹಿಂದೆ ನಿರ್ದೇಶನ ನೀಡಲಾಗಿತ್ತು. ಆದರೆ, ಈವರೆಗೂ ಆದೇಶ ಅನುಷ್ಠಾನಕ್ಕೆ ಬಂದಿಲ್ಲ. ಇದರ ಹಿಂದೆ ಯಾವುದೇ ಕಾರಣಗಳೂ ಇಲ್ಲ. ದೇಶದ ಎಲ್ಲಾ ನಾಗರಿಕರಿಗೆ ಮೂಲಭೂತ ಹಕ್ಕುಗಳನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ. ಗುರುತಿನ ಪುರಾವೆ ಇಲ್ಲದಿದ್ದರೂ ಲೈಂಗಿಕ ಕಾರ್ಯಕರ್ತೆಯರಿಗೆ ಒಣ ಪಡಿತರವನ್ನು ನೀಡಬೇಕು ಎಂದು ಕೇಂದ್ರ ಮತ್ತು ಇತರೆ ಸರ್ಕಾರಗಳಿಗೆ ಪೀಠ ನಿರ್ದೇಶನ ನೀಡಿದೆ.
ಇದನ್ನೂ ಓದಿ: ಬಡ ವಿದ್ಯಾರ್ಥಿ ಬೆನ್ನಿಗೆ ನಿಂತ ಸುಪ್ರೀಂ ಕೋರ್ಟ್; ವಿಶೇಷ ಅಧಿಕಾರ ಬಳಸಿ ಐಐಟಿ-ಬಾಂಬೆಗೆ ಆದೇಶ, 48 ಗಂಟೆಯಲ್ಲೇ ಅಡ್ಮಿಷನ್
ಅಧಿಕಾರಿಗಳು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (ಎನ್ಎಸಿಒ) ಮತ್ತು ರಾಜ್ಯ ಏಡ್ಸ್ ನಿಯಂತ್ರಣ ಸಂಘಗಳ ನೆರವು ತೆಗೆದುಕೊಳ್ಳಬಹುದು. ಅವರು ಸಮುದಾಯ ಆಧಾರಿತ ಸಂಸ್ಥೆಗಳು ಒದಗಿಸಿದ ಮಾಹಿತಿಯನ್ನು ಪರಿಶೀಲಿಸಿದ ನಂತರ ಲೈಂಗಿಕ ಕಾರ್ಯಕರ್ತರ ಪಟ್ಟಿಯನ್ನು ಸಿದ್ಧಪಡಿಸುತ್ತಾರೆ ಎಂದು ಪೀಠವು ನಿರ್ದೇಶಿಸಿದೆ.
ಈ ಹಿಂದೆ, 2020 ರ ಸೆಪ್ಟೆಂಬರ್ 29 ರಂದು ಸುಪ್ರೀಂ ಕೋರ್ಟ್, NACO ನಿಂದ ಗುರುತಿಸಲ್ಪಟ್ಟ ಲೈಂಗಿಕ ಕಾರ್ಯಕರ್ತರಿಗೆ ಯಾವುದೇ ಗುರುತಿನ ಪುರಾವೆಯನ್ನು ಒತ್ತಾಯಿಸದೆ ಒಣ ಪಡಿತರವನ್ನು ಒದಗಿಸುವಂತೆ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಅಲ್ಲದೆ ಇದರ ಅನುಸರಣೆಯ ಸ್ಥಿತಿಯ ವರದಿಯನ್ನು ಕೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


