ಸೆರಂ ಇನ್‌ಸ್ಟಿಟ್ಯೂಟ್ ನಿಂದ ಆರು ತಿಂಗಳಲ್ಲಿ ಮಕ್ಕಳಿಗೆ ಕೋವಿಡ್ ಲಸಿಕೆ: ಪೂನಾವಾಲ
ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ) ಮುಂದಿನ ಆರು ತಿಂಗಳಲ್ಲಿ ಮಕ್ಕಳಿಗೆ ಕೋವಿಡ್ ಲಸಿಕೆ ಬಿಡುಗಡೆ ಮಾಡಲು ಯೋಜಿಸಿದೆ ಎಂದು ಕಂಪನಿಯ ಸಿಇಒ ಅದಾರ್ ಪೂನಾವಾಲಾ ಅವರು ಮಂಗಳವಾರ ಹೇಳಿದ್ದಾರೆ.

ನವದೆಹಲಿ: ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ) ಮುಂದಿನ ಆರು ತಿಂಗಳಲ್ಲಿ ಮಕ್ಕಳಿಗೆ ಕೋವಿಡ್ ಲಸಿಕೆ ಬಿಡುಗಡೆ ಮಾಡಲು ಯೋಜಿಸಿದೆ ಎಂದು ಕಂಪನಿಯ ಸಿಇಒ ಅದಾರ್ ಪೂನಾವಾಲಾ ಅವರು ಮಂಗಳವಾರ ಹೇಳಿದ್ದಾರೆ.
ಉದ್ಯಮ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಪೂನಾವಾಲಾ, ಮಕ್ಕಳ ಲಸಿಕೆ 'ಕೋವೊವ್ಯಾಕ್ಸ್' ಲಸಿಕೆ ಪ್ರಯೋಗ ಹಂತದಲ್ಲಿದೆ ಮತ್ತು ಇದು ಮೂರು ವರ್ಷ ಮೇಲ್ಪಟ್ಟ ಮಕ್ಕಳಿಗೆ ರಕ್ಷಣೆ ನೀಡುತ್ತದೆ ಎಂದು ಹೇಳಿದರು.
ಪ್ರಸ್ತುತ, ಕೋವಿಶೀಲ್ಡ್ ಮತ್ತು ಇತರ ಕೋವಿಡ್ ಲಸಿಕೆಗಳನ್ನು 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ನೀಡಲು ಅನುಮೋದಿಸಲಾಗಿದೆ.
"ನಾವು ಮಕ್ಕಳಲ್ಲಿ ಸಾಕಷ್ಟು ತೀವ್ರವಾದ ಕಾಯಿಲೆಗಳನ್ನು ನೋಡಿಲ್ಲ. ಅದೃಷ್ಟವಶಾತ್, ಮಕ್ಕಳಿಗೆ ಕೋವಿಡ್ ಭಯವಿಲ್ಲ. ಆದಾಗ್ಯೂ, ನಾವು ಆರು ತಿಂಗಳಲ್ಲಿ ಮೂರು ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆಯನ್ನು ಪ್ರಾರಂಭಿಸುತ್ತೇವೆ" ಎಂದು ಪೂನಾವಾಲಾ ಹೇಳಿದರು.
ನೀವು ನಿಮ್ಮ ಮಕ್ಕಳಿಗೆ ಲಸಿಕೆ ಹಾಕಬೇಕು. ಇದರಿಂದ ಯಾವುದೇ ಹಾನಿ ಇಲ್ಲ ಎಂದು ನಾನು ಭಾವಿಸುತ್ತೇನೆ, ಈ ಲಸಿಕೆಗಳು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ಸಾಬೀತಾಗಿದೆ ಮತ್ತು ನಿಮ್ಮ ಮಕ್ಕಳಿಗೆ ಲಸಿಕೆ ಹಾಕಲು ನೀವು ಬಯಸಿದರೆ ಸರ್ಕಾರದ ಅನುಮತಿಗಾಗಿ ಕಾಯಿರಿ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


