ಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ಬಸ್ ಮೇಲೆ ಉಗ್ರರ ದಾಳಿ: ಮೃತರ ಸಂಖ್ಯೆ ಮೂರಕ್ಕೆ ಏರಿಕೆ, ಮತ್ತೊಂದು ಎನ್ ಕೌಂಟರ್ ಪ್ರಗತಿಯಲ್ಲಿ
ಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ವಾಹನದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಕಾನ್ಸ್ ಟೇಬಲ್ ಒಬ್ಬರು ಸಾವನ್ನಪ್ಪಿದ್ದ ನಂತರ ಮಂಗಳವಾರ ಮೃತರ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ವಾಹನದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಕಾನ್ಸ್ ಟೇಬಲ್ ಒಬ್ಬರು ಸಾವನ್ನಪ್ಪಿದ್ದ ನಂತರ ಮಂಗಳವಾರ ಮೃತರ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ. ಪೊಂಚ್ ನ ಸುರಾನ್ ಕೋಟೆ ವಲಯದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಮತ್ತೋಂದು ಎನ್ ಕೌಂಟರ್ ಪ್ರಗತಿಯಲ್ಲಿದೆ.
ಶ್ರೀನಗರ ಹೊರವಲಯ ಜೆವಾನ್ ಪೊಲೀಸ್ ಕ್ಯಾಂಪ್ ಹತ್ತಿರ ಸೋಮವಾರ ಪೊಲೀಸ್ ವಾಹನದ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಮೃತಪಟ್ಟು, 14 ಮಂದಿ ಗಾಯಗೊಂಡಿದ್ದರು.ಈ ಘಟನೆ ನಡೆದ ಮಾರನೇ ದಿನವೇ ಇದು ನಡೆದಿದೆ.
ಜಮ್ಮು-ಕಾಶ್ಮೀರದ ಸಶಸ್ತ್ರ ಪೊಲೀಸ್ ಪಡೆಯ 9ನೇ ಬೆಟಾಲಿಯನ್ ನ ಕಾನ್ಸ್ ಟೇಬಲ್ ರಮೀಜ್ ಅಹ್ಮದ್ ಗಾಯಗೊಂಡು ಸೇನೆಯ 92 ಬೇಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


