ಮತಾಂತರ ನಿಷೇಧ ಕಾಯ್ದೆ ಬಗ್ಗೆ ಬಿಜೆಪಿ ಶಾಸಕಾಂಗ ಪಕ್ಷದಲ್ಲಿ ವಿಸ್ತೃತ ಚರ್ಚೆ: ಗೃಹ ಸಚಿವ
ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಬಿಜೆಪಿ ಶಾಸಕಾಂಗ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಬಿಜೆಪಿ ಶಾಸಕಾಂಗ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಡಿ.15 ರಂದು ಸಂಜೆ ಬೆಳಗಾವಿಯಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಆರಗ ಜ್ಞಾನೇಂದ್ರ, ಮಸೂದೆಯನ್ನು ಶಾಸನ ಸಭೆಗೆ ತರುವುದಕ್ಕೂ ಮುನ್ನ ಅದರ ಮಹತ್ವವನ್ನು ಶಾಸಕರಿಗೆ ತಿಳಿಸಬೇಕು ಎಂದು ಸಚಿವರು ಹೇಳಿದ್ದಾರೆ.
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುತ್ತಿರುವುದನ್ನು ವಿರೋಧಿಸಿ ಮಹಾಮೇಳವ್ ನಡೆಸಲು ಯತ್ನಿಸಿದ ಎಂಇಎಸ್ ನಾಯಕನ ಮುಖಕ್ಕೆ ಕಪ್ಪು ಮಸಿ ಬಳಿದ ಸಂಪತ್ ಕುಮಾರ್ ದೇಸಾಯಿ ವಿರುದ್ಧದ ಪ್ರಕರಣವನ್ನು ಪೊಲೀಸರು ಹಿಂಪಡೆಯುತ್ತಾರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವರು, ಈ ಪ್ರಕರಣಕ್ಕೆ ಸಂಬಂಧಿಸಿದ ಅಗತ್ಯ ಕ್ರಮಗಳನ್ನು ಪೊಲೀಸ್ ಇಲಾಖೆ ಜರುಗಿಸಲಿದೆ, ಮಹಾಮೇಳವ್ ಆಯೋಜನೆ ಮಾಡಿದವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದಷ್ಟೇ ಹೇಳಿದ್ದಾರೆ.
ವಿಧಾನಪರಿಷತ್ ಚುನಾವಣೆಯಲ್ಲಿ ಬೆಳಗಾವಿಯ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟ್ಗಿಮಠ ಸೋಲಿಗೆ ಕಾರಣರಾದ ಪಕ್ಷದವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆಯೇ? ಎಂಬ ಪ್ರಶ್ನೆಗೆ ಪಕ್ಷದ ನಾಯಕತ್ವ ಅದನ್ನು ತೀರ್ಮಾನಿಸಲಿದೆ ಎಂದು ಗೃಹ ಸಚಿವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


