ಭುವನ ಸುಂದರಿ ಹರ್ನಾಜ್ ಸಂಧು ಭೇಟಿ ಮಾಡಿ, ಅಭಿನಂದಿಸಿದ ಶಶಿ ತರೂರ್
ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ನೂತನವಾಗಿ 2021ರ ಭುವನ ಸುಂದರಿ ಕಿರೀಟ ಅಲಂಕರಿಸಿರುವ ಪಂಜಾಬ್ ಮೂಲದ ಹರ್ನಾಜ್ ಕೌರ್ ಸಂಧು ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ನೂತನವಾಗಿ 2021ರ ಭುವನ ಸುಂದರಿ ಕಿರೀಟ ಅಲಂಕರಿಸಿರುವ ಪಂಜಾಬ್ ಮೂಲದ ಹರ್ನಾಜ್ ಕೌರ್ ಸಂಧು ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಡಿಸೆಂಬರ್ 13 ರಂದು ಇಸ್ರೇಲ್‌ನ ಐಲಾಟ್‌ನಲ್ಲಿ ನಡೆದ 70ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು ಅವರನ್ನು ವಿಜೇತ ಎಂದು ಘೋಷಿಸಲಾಯಿತು. 21 ವರ್ಷಗಳ ಬಳಿಕ ಭಾರತಕ್ಕೆ ಮತ್ತೊಮ್ಮೆ ಭುವನ ಸುಂದರಿ ಪಟ್ಟ ಒಲಿದಿದೆ.
ಇದನ್ನು ಓದಿ: ಭುವನ ಸುಂದರಿ ಹರ್ನಾಜ್ ಕೌರ್ ಸಂಧು ಭಾರತಕ್ಕೆ ಆಗಮನ
ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಹರ್ನಾಜ್ ಸಂಧು ಅವರನ್ನು ಭೇಟಿ ಮಾಡಿ ಅಭಿನಂದಿಸಿದ ಫೋಟೋಗಳನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮಿಸ್ ಯೂನಿವರ್ಸ್ ಹರ್ನಾಜ್ ಕೌರ್ ಸಂಧು ಅವರು ಭಾರತಕ್ಕೆ ವಿಜಯಶಾಲಿಯಾಗಿ ಹಿಂದಿರುಗಿದ್ದಕ್ಕಾಗಿ ಅವರನ್ನು ವೈಯಕ್ತಿಕವಾಗಿ ಅಭಿನಂದಿಸಲು ಸಂತೋಷವಾಗಿದೆ. ಸಹಜವಾಗಿ, ಅವರನ್ನು ಸ್ವಾಗತಿಸಲು ಹೆಮ್ಮೆಪಡುತ್ತೇನೆ. ಅವರು ವೇದಿಕೆಯಲ್ಲಿ ಕಾಣುವಂತೆಯೇ ವೈಯಕ್ತಿಕವಾಗಿಯೂ ಸಮಚಿತ್ತ ಮತ್ತು ಆಕರ್ಷಕರಾಗಿದ್ದಾರೆ ಎಂದು ತರೂರ್ ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


