ದೆಹಲಿಯಲ್ಲಿ ಜನವರಿ 1ಕ್ಕೆ 10 ವರ್ಷ ಪೂರೈಸುವ ಎಲ್ಲಾ ಡೀಸೆಲ್ ವಾಹನಗಳ ನೋಂದಣಿ ರದ್ದು
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್ ಜಿಟಿ)ಯ ನಿರ್ದೇಶನಗಳಿಗೆ ಅನುಸಾರವಾಗಿ, ದೆಹಲಿ ಸರ್ಕಾರ ಜನವರಿ 1, 2022 ರಂದು 10 ವರ್ಷ ಪೂರೈಸುವ ಎಲ್ಲಾ ಡೀಸೆಲ್ ವಾಹನಗಳ ನೋಂದಣಿಯನ್ನು ರದ್ದುಗೊಳಿಸುತ್ತಿದೆ...

ನವದೆಹಲಿ: ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್ ಜಿಟಿ)ಯ ನಿರ್ದೇಶನಗಳಿಗೆ ಅನುಸಾರವಾಗಿ, ದೆಹಲಿ ಸರ್ಕಾರ ಜನವರಿ 1, 2022 ರಂದು 10 ವರ್ಷ ಪೂರೈಸುವ ಎಲ್ಲಾ ಡೀಸೆಲ್ ವಾಹನಗಳ ನೋಂದಣಿಯನ್ನು ರದ್ದುಗೊಳಿಸುತ್ತಿದೆ ಮತ್ತು ನಿರಾಕ್ಷೇಪಣೆ ಪ್ರಮಾಣಪತ್ರ(ಎನ್ಒಸಿ) ನೀಡುತ್ತದೆ. ಇದರಿಂದ ಅವುಗಳನ್ನು ಇತರ ಸ್ಥಳಗಳಲ್ಲಿ ಮರು ನೋಂದಾಯಿಸಿಕೊಳ್ಳಬಹುದಾಗಿದೆ.
ಆದಾಗ್ಯೂ, ದೆಹಲಿ ಸಾರಿಗೆ ಇಲಾಖೆಯು ಈ ವಾರದ ಆರಂಭದಲ್ಲಿ ಹೊರಡಿಸಿದ ಆದೇಶದ ಪ್ರಕಾರ, ಅರ್ಜಿ ಸಲ್ಲಿಸುವ ದಿನಾಂಕದಂದು 15 ವರ್ಷ ಅಥವಾ ಅದಕ್ಕಿಂತ ಹೆಚ್ಚು ವರ್ಷ ಪೂರೈಸಿದ ಡೀಸೆಲ್ ವಾಹನಗಳಿಗೆ ಯಾವುದೇ ಎನ್ ಒಸಿ ನೀಡಲಾಗುವುದಿಲ್ಲ ಎಂದು ತಿಳಿಸಿದೆ.
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ದೆಹಲಿ- NCR (ರಾಷ್ಟ್ರೀಯ ರಾಜಧಾನಿ ಪ್ರದೇಶ) ನಲ್ಲಿ 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳು ಮತ್ತು 15 ವರ್ಷಕ್ಕಿಂತ ಹಳೆಯದಾದ ಪೆಟ್ರೋಲ್ ವಾಹನಗಳ ನೋಂದಣಿ ಮತ್ತು ಓಡಾಟದ ಮೇಲಿನ ನಿರ್ಬಂಧಗಳಿಗೆ ಸಂಬಂಧಿಸಿದಂತೆ ನಿರ್ದೇಶನಗಳನ್ನು ನೀಡಿದೆ.
ಜುಲೈ 2016 ರಲ್ಲಿ ಎನ್ ಜಿಟಿ ನೀಡಿದ ಆದೇಶದಲ್ಲಿ, 10 ವರ್ಷಗಳಿಗಿಂತ ಹೆಚ್ಚು ಹಳೆಯದಾದ ಡೀಸೆಲ್ ವಾಹನಗಳ ನೋಂದಣಿ ರದ್ದುಗೊಳಿಸುವ ನಿರ್ದೇಶನವನ್ನು ತಪ್ಪದೆ ಜಾರಿಗೊಳಿಸಬೇಕು ಎಂದು ಹೇಳಿದೆ.
ಇಲಾಖೆಯು 10 ವರ್ಷಗಳನ್ನು ಪೂರ್ಣಗೊಳಿಸಿದ ಅಥವಾ ಪೂರ್ಣಗೊಳಿಸುವ ದಿನಾಂಕದಂದು 2022ರ ಜನವರಿ 1 ರಂದು ದೆಹಲಿಯಲ್ಲಿ ಎಲ್ಲಾ ಡೀಸೆಲ್ ವಾಹನಗಳ ನೋಂದಣಿ ರದ್ದುಪಡಿಸುತ್ತಿದೆ ಎಂದು ದೆಹಲಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


