ಭಾರತೀಯ ಹೆಣ್ಣುಮಕ್ಕಳ ವಿವಾಹಕ್ಕೆ ಕನಿಷ್ಟ ವಯಸ್ಸು 18 ರಿಂದ 21ಕ್ಕೆ ಹೆಚ್ಚಳ: ಕೇಂದ್ರ ಸಂಪುಟ ಅನುಮೋದನೆ
ಮಹಿಳೆಯರ ಮದುವೆ ವಯಸ್ಸಿನ ಮಿತಿಯನ್ನು 18ರಿಂದ 21 ವರ್ಷಕ್ಕೆ ಏರಿಸುವ ಪ್ರಸ್ತಾಪವನ್ನು ಬುಧವಾರ ಕೇಂದ್ರ ಸಂಪುಟ ಅಂಗೀಕರಿಸಿದೆ.

ನವದೆಹಲಿ: ಮಹಿಳೆಯರ ಮದುವೆ ವಯಸ್ಸಿನ ಮಿತಿಯನ್ನು 18ರಿಂದ 21 ವರ್ಷಕ್ಕೆ ಏರಿಸುವ ಪ್ರಸ್ತಾಪವನ್ನು ಬುಧವಾರ ಕೇಂದ್ರ ಸಂಪುಟ ಅಂಗೀಕರಿಸಿದೆ.
ಯುವತಿಯರ ಮದುವೆ ವಯಸ್ಸನ್ನು 18ವರ್ಷಕ್ಕೆ ನಿಗದಿಪಡಿಸಲಾಗಿದೆ. ಅದನ್ನು ಮರುಪರಿಶೀಲನೆ ಮಾಡಲಾಗುವುದು. ಇದಕ್ಕಾಗಿ ಒಂದು ಸಮಿತಿ ರಚಿಸಲಾಗುವುದು ಎಂದು 2020ರ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದರು.
ಒಂದೂವರೆ ವರ್ಷದ ಬಳಿಕ ಅದನ್ನೀಗ ಅನುಷ್ಠಾನಕ್ಕೆ ತರಲು ಕೇಂದ್ರ ಸಂಪುಟ ಮುಂದಡಿ ಇಟ್ಟಿದೆ. ದೇಶದಲ್ಲಿ ಇರುವ ಬಾಣಂತಿ-ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡಲು, ಪೌಷ್ಟಿಕಾಂಶದ ಕೊರತೆ ನೀಗಿಸಲು ಮತ್ತು ಮಹಿಳೆಯರ ಮದುವೆ ವಯಸ್ಸಿನ ಮಿತಿ ಹೆಚ್ಚಿಸುವುದರಿಂದ, ಸಹಜವಾಗಿಯೇ ತಾಯ್ತನದ ವಯಸ್ಸಿನ ಮಿತಿಯೂ ಏರುತ್ತದೆ.
ಹೀಗಾಗಿ ಒಂದಷ್ಟು ಸಮಸ್ಯೆಗಳು ನಿವಾರಣೆಯಾಗುತ್ತವೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಅದರ ಬಗ್ಗೆ ಪರಿಶೀಲಿಸಲು ಕೇಂದ್ರ ಸರ್ಕಾರ ಒಂದು ಟಾಸ್ಕ್ಫೋರ್ಸ್ ರಚಿಸಿತ್ತು. ಈ ಟಾಸ್ಕ್ ಫೋರ್ಸ್ನ ಶಿಫಾರಸ್ಸಿನ ಅನ್ವಯ ಪ್ರಸ್ತಾಪಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


