ಮಹಾರಾಷ್ಟ್ರದ ಸಾಂಪ್ರದಾಯಿಕ ಎತ್ತಿನಗಾಡಿ ಓಟಕ್ಕೆ ಸುಪ್ರೀಂ ಕೋರ್ಟ್ ಅಸ್ತು
ಮಹಾರಾಷ್ಟ್ರದ ಸಾಂಪ್ರದಾಯಿಕ ಎತ್ತಿನಗಾಡಿ ಓಟದ ಸ್ಪರ್ಧೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ.

ಮುಂಬೈ: ಮಹಾರಾಷ್ಟ್ರದ ಸಾಂಪ್ರದಾಯಿಕ ಎತ್ತಿನಗಾಡಿ ಓಟದ ಸ್ಪರ್ಧೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ.
ದೇಶದಾದ್ಯಂತ ಇತರ ರಾಜ್ಯಗಳಾದ ಕರ್ನಾಟಕ, ತಮಿಳುನಾಡಿನಲ್ಲಿ ಇದೇ ರೀತಿಯ ಕ್ರೀಡೆಗಳು ನಡೆಯುತ್ತಿರುವಾಗ ಮಹಾರಾಷ್ಟ್ರ ರಾಜ್ಯದಲ್ಲಿ ಮಾತ್ರ ಅದನ್ನು ನಿಷೇಧ ಹೇರಲು ಯಾವುದೇ ಕಾರಣವಿಲ್ಲ ಎಂದು ಸುಪ್ರೀಂ ಹೇಳಿದೆ.
ಮಹಾರಾಷ್ಟ್ರದ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ತಮಿಳುನಾಡು ಮತ್ತು ಕರ್ನಾಟಕ ತಮ್ಮ ತಿದ್ದುಪಡಿಗಳ ಆಧಾರದ ಮೇಲೆ ಪ್ರತಿವರ್ಷ ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ನಡೆಸುತ್ತಿವೆ, ಆದರೆ ಮಹಾರಾಷ್ಟ್ರಕ್ಕೆ ಮಾತ್ರ ಯಾಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದರು.
“ಒಂದು ದೇಶ, ಒಂದು ಜನಾಂಗ, ನಾವು ಏಕರೂಪತೆಯನ್ನು ಹೊಂದಿರಬೇಕು ಮತ್ತು ಒಂದೇ ನಿಯಮ ಇರಬೇಕು. ಬೇರೆ ರಾಜ್ಯಗಳಲ್ಲಿ ರೇಸ್‍ಗಳು ನಡೆಯುತ್ತಿದೆ. ಆದರೆ ಮಹಾರಾಷ್ಟ್ರಕ್ಕೆ ಮಾತ್ರ ಏಕೆ ಅನುಮತಿ ನೀಡಬಾರದು,”ಎಂದು ದ್ವಿಸದಸ್ಯ ಪೀಠದ ನೇತೃತ್ವದ ನ್ಯಾಯಮೂರ್ತಿ ಖಾನ್ವಿಲ್ಕರ್ ಪ್ರಶ್ನಿಸಿದರು.
ಎ ನಾಗರಾಜ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‍ನ 2014 ರ ತೀರ್ಪು ಉಲ್ಲೇಖಿಸಲಾಗಿದೆ, ಇದರಲ್ಲಿ ಜಲ್ಲಿಕಟ್ಟು ನಿಷೇಧಿಸಲಾಗಿದೆ, ಇದು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ (ಪಿಸಿಎ) ಕಾಯ್ದೆಯಡಿಯಲ್ಲಿ ಗೂಳಿಗಳ ಮೇಲಿನ ಕ್ರೌರ್ಯಕ್ಕೆ ಸಮಾನವಾಗಿದೆ.
ತಮಿಳುನಾಡು ಮತ್ತು ಕರ್ನಾಟಕದಂತಹ ರಾಜ್ಯಗಳು 2014ರಲ್ಲಿ ಎಸ್‍ಸಿ ತೀರ್ಪಿನ ನಂತರ ಪಿಸಿಎ ಕಾಯ್ದೆಗೆ ತಿದ್ದುಪಡಿಗಳನ್ನು ತಂದಿದ್ದು, ಜಲ್ಲಿಕಟ್ಟು ಮತ್ತು ಎತ್ತಿನ ಬಂಡಿ ರೇಸ್‍ಗೆ ಅವಕಾಶ ಕಲ್ಪಿಸಲು ಅನುವು ಮಾಡಿಕೊಟ್ಟಿವೆ. ಇವುಗಳನ್ನು ಸಹ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಲಾಗಿದ್ದರೂ, ಸುಪ್ರೀಂ ಕೋರ್ಟ್ ಯಾವುದೇ ಆದೇಶವನ್ನು ನೀಡಲಿಲ್ಲ ಮತ್ತು ಬದಲಿಗೆ ವಿಷಯವನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸಿತು. ಆದಾಗ್ಯೂ, ಓಟವನ್ನು ಅನುಮತಿಸಲು ಮಹಾರಾಷ್ಟ್ರವು 2017ರಲ್ಲಿ ಪಿಸಿಎ ಕಾಯಿದೆಗೆ ತಿದ್ದುಪಡಿ ಮಾಡಿದ್ದರೂ, ಬಾಂಬೆ ಹೈಕೋರ್ಟ್ ಒಪ್ಪದೆ ಮನವಿಯನ್ನು ತಡೆಹಿಡಿದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


